ವಿಜಯಪುರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 20 ಮತ್ತು 21 ಜನವರಿ 2026ರಂದು ಹಿಟ್ಟಿನಹಳ್ಳಿ ಶ್ರೀ ಶಿವಮೂರ್ತಿ ಸ್ವಾಮಿ ಚರಂತಿಮಠ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

