Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ಹಳ್ಳಾಡಿ ಜಯರಾಮ ಶೆಟ್ಟಿ ಆಯ್ಕೆ | ಆಗಸ್ಟ್ 10
    Awards

    ವಿಶ್ವ ಬಂಟ ಪ್ರತಿಷ್ಠಾನ ಪ್ರಶಸ್ತಿಗೆ ಹಳ್ಳಾಡಿ ಜಯರಾಮ ಶೆಟ್ಟಿ ಆಯ್ಕೆ | ಆಗಸ್ಟ್ 10

    August 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
     ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನವು ಡಾ. ಡಿ. ಕೆ. ಚೌಟ ದತ್ತಿನಿಧಿಯಿಂದ ನೀಡುವ ‘ಯಕ್ಷಗಾನ ಪ್ರಶಸ್ತಿ’ಗೆ 2024ನೇ ಸಾಲಿನಲ್ಲಿ ಬಡಗು ತಿಟ್ಟಿನ ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಪ್ರೊ. ಜಿ. ಆರ್. ರೈ, ಪಳ್ಳಿ ಕಿಶನ್ ಹೆಗ್ಡೆ ಮತ್ತು ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಅವರ ಹೆಸರನ್ನು ಶಿಫಾರಸು ಮಾಡಿದೆ. ಪ್ರಶಸ್ತಿಯು ರೂ.25,000/- ನಗದು ಹಾಗೂ ಫಲಕವನ್ನೊಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಲೆಕ್ಕ ಪರಿಶೋಧಕ (ಸಿ. ಎ.) ವೈ. ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
    ಹಳ್ಳಾಡಿ ಜಯರಾಮ ಶೆಟ್ಟಿ:
    ಕುಂದಾಪುರ ತಾಲೂಕಿನ ಹಳ್ಳಾಡಿಯ ಅಣ್ಣಪ್ಪ ಶೆಟ್ಟಿ ಹಾಗೂ ಅಕ್ಕಮ್ಮ ದಂಪತಿಗೆ 1955ರಲ್ಲಿ ಜನಿಸಿದ ಜಯರಾಮ ಶೆಟ್ಟಿ ಬಡಗು ತಿಟ್ಟಿನಲ್ಲಿ ಮುಂಚೂಣಿಯಲ್ಲಿರುವ ಹಿರಿಯ ಹಾಸ್ಯ ಕಲಾವಿದ. ಕಮಲಶಿಲೆ, ಮಂದರ್ತಿ, ಪೆರ್ಡೂರು, ಅಮೃತೇಶ್ವರಿ, ಸಾಲಿಗ್ರಾಮವಲ್ಲದೆ ತೆಂಕಿನ ಕುಂಬಳೆ ಮತ್ತು ಮೂಲ್ಕಿ ಮೇಳಗಳಲ್ಲಿ ಒಟ್ಟು 55 ವರ್ಷಗಳ ತಿರುಗಾಟ ಮಾಡಿದ್ದಾರೆ. ಸಾಲಿಗ್ರಾಮ ಮೇಳವೊಂದರಲ್ಲೇ 25 ವರ್ಷಗಳ ಸೇವೆ ಅವರದು.
     ದಾರುಕ, ಬಾಹುಕ, ಚಂದಗೋಪ, ಮಂಥರೆ, ಕಂದರ, ಕೈರವ, ಕೋಳಿಪಡಿ ಕುಷ್ಠ, ಸಂಧ್ಯಾ ಸಾವೇರಿಯ ಸುಂದರ ಅವರಿಗೆ ಹೆಸರು ತಂದ ಪಾತ್ರಗಳು. ಭೀಮ, ವಲಲ, ಮದನ, ಕೃಷ್ಣ, ಯಮ ಮೊದಲಾದ ಸಂಕೀರ್ಣ ಪಾತ್ರಗಳನ್ನೂ ನಿರ್ವಹಿಸಿದ್ದಾರೆ. ಸಾಂಪ್ರದಾಯಿಕ ಹೂವಿನ ಕೋಲು, ಪೀಠಿಕೆ ಸ್ತ್ರೀ ವೇಷ, ಚೆಂಡೆ – ಮದ್ದಳೆ ವಾದನಗಳಲ್ಲೂ ಪರಿಶ್ರಮವಿದೆ.
    ಪೇಜಾವರ ಮಠದ ರಾಮ ವಿಠಲ ಪ್ರಶಸ್ತಿ, ಕಲಾದರ್ಶಿನಿಯ ಕಾರಂತ ಪ್ರಶಸ್ತಿ, ಆರಾಟೆ ಪ್ರಶಸ್ತಿ, ಪಡುಬಿದ್ರಿ ಸುಂದರ ಶೆಟ್ಟಿ ಪ್ರಶಸ್ತಿ, ಹಾಸ್ಯರತ್ನ – ಹಾಸ್ಯ ಚಕ್ರವರ್ತಿ – ಯಕ್ಷ ಕಲಾರತ್ನ ಬಿರುದುಗಳು ಸಂದಿರುವುದು ಅವರ ಕಲಾ ಪ್ರೌಢಿಮೆಗೆ ಸಾಕ್ಷಿ.
    ಪತ್ನಿ ರೇಣುಕಾ, ಪುತ್ರ ರತೀಶ, ಪುತ್ರಿ ಸೌಮ್ಯ ಸಹಿತ ಮಕ್ಕಳು – ಮೊಮ್ಮಕ್ಕಳೊಂದಿಗೆ ಹಳ್ಳಾಡಿ ಸಮೀಪ ಕಕ್ಕುಂಜೆಯಲ್ಲಿ ವಾಸವಾಗಿರುವ ಹಳ್ಳಾಡಿಯವರು ಸಂತೃಪ್ತ ಸಂಸಾರಿ.
    10 ಆಗಸ್ಟ್2024ರಂದು ನಗರದ ಮೋತಿ ಮಹಲ್ ಹೋಟೆಲ್‌ನಲ್ಲಿ ನಡೆಯುವ ವಿಶ್ವ ಬಂಟ ಪ್ರತಿಷ್ಠಾನ ಟ್ರಸ್ಟ್‌ ಇದರ 28ನೇ ವಾರ್ಷಿಕ ಮಹಾಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಡಾ. ಎ. ಜೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮೇಜರ್ ಜನರಲ್ ಸತೀಶ್ ಭಂಡಾರಿ ಅವರಿಗೆ ‘ಎಮಿನೆಂಟ್ ಬಂಟ್ ಪರ್ಸನಾಲಿಟಿ ಅವಾರ್ಡ್’ ಕೂಡಾ ನೀಡಲಾಗುವುದು.
     ಸಮಾರಂಭದಲ್ಲಿ ಕೃಷಿ ಕ್ಷೇತ್ರದ ಸಾಧನೆಗಾಗಿ ಪುಷ್ಪ ಶೆಟ್ಟಿ ಅವರಿಗೆ ‘ದಿ. ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ’ , ಸಿ. ಎ.  ಮನೀಶ್ ಶೆಟ್ಟಿ ಅವರಿಗೆ “ಸಿ. ಎ.  ವೈ. ಆರ್. ಶೆಟ್ಟಿ ದತ್ತಿನಿಧಿ ಪ್ರಶಸ್ತಿ” , ಸಿ. ಎ. ರೋಶನ್ ಶೆಟ್ಟಿ ಅವರಿಗೆ “ಸಿ. ಎ. ಗೋಪಾಲ್ ಬಿ. ಶೆಟ್ಟಿ ದತ್ತಿನಿಧಿ ಪ್ರಶಸ್ತಿ” ಹಾಗೂ ಮಂಗಳೂರು ವಿ.ವಿ.ಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಇವರನ್ನು ಅಭಿನಂದಿಸಲಾಗುವುದು ಎಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿಯಾದ ಮತ್ತು ಲೆಕ್ಕ ಪರಿಶೋಧಕ ಸುಧೀರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ವಿ. ವಿ. ಯ ಯಕ್ಷಪಯಣ ಸರಣಿಯಲ್ಲಿ ಮಾಂಬಾಡಿ ಸುಬ್ರಹ್ಮಣ್ಯ ಭಟ್   
    Next Article ಕುಂಬಳೆ ಶ್ರೀಧರ ರಾವ್‌ ಇವರಿಗೆ ನುಡಿನಮನ
    roovari

    Comments are closed.

    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನ ಪ್ರಕಟ

    February 16, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.