Subscribe to Updates

    Get the latest creative news from FooBar about art, design and business.

    What's Hot

    ‘ಯಕ್ಷಮಂಜರಿ’ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಅಷ್ಟಮ ದಿನ ಸಮಾರೋಪ ಸಮಾರಂಭ

    March 9, 2026

    ವಿಜಯಪುರದಲ್ಲಿ ವ್ಯಾಸರಾಯರ ಆರಾಧನೆ ಸಂಗೀತ ಗಮಕೋತ್ಸವ

    March 9, 2026

    ಕೊಂಚಾಡಿ ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತಾಳಮದ್ದಳೆ

    March 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಬಪ್ಪಳಿಗೆ ಅಂಬಿಕಾ ಕಾಲೇಜಿನಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ
    Literature

    ಬಪ್ಪಳಿಗೆ ಅಂಬಿಕಾ ಕಾಲೇಜಿನಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮ

    August 25, 2024Updated:August 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email



    ಪುತ್ತೂರು: ಪುತ್ತೂರಿನ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ. ಬಿ. ಎಸ್‌. ಇ. ಸಂಸ್ಥೆಯಲ್ಲಿ ವಿಶ್ವ ಸಂಸ್ಕೃತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮವು 19 ಆಗಸ್ಟ್ 2024ರಂದು ನಡೆಯಿತು.
    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಬಪ್ಪಳಿಗೆ ಅಂಬಿಕಾ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥೆ ಶಶಿಕಲಾ ವರ್ಕಾಡಿ ಮಾತನಾಡಿ “ಸಂಸ್ಕೃತ ಕೇವಲ ಭಾಷೆಯಲ್ಲ ಅದು ಭಾರತಾಂಬೆಯ ಆತ್ಮದ ಧ್ವನಿ. ಹಿಂದೆ ಭಾರತದ ಸಾಧನೆ ಹೇಗಿತ್ತು ಎಂಬುದನ್ನು ಸಂಸ್ಕೃತ ತೋರಿಸಿ ಕೊಡುತ್ತದೆ. ಈ ಭಾಷೆ ದೇಹದ ನರನಾಡಿಗಳ ಆರೋಗ್ಯ ವೃದ್ಧಿಗೂ ಕಾರಣೀಭೂತವಾಗಿದೆ. ನ್ಯಾಯಾಲಯ, ವಾಯು ಸೇನೆ, ನೌಕಾ ಸೇನೆ, ಭೂ ಸೇನೆ ಇತ್ಯಾದಿ ಎಲ್ಲಾ ಸ್ಥಳಗಳಲ್ಲಿ ಸಂಸ್ಕೃತದ ಧ್ಯೇಯವಾಕ್ಯಗಳನ್ನು ನಾವು ಕಾಣಬಹುದು.” ಎಂದು ಹೇಳಿದ್ದಾರೆ.


    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ “ರಕ್ಷೆಯಲ್ಲಿನ ಎಲ್ಲಾ ದಾರಗಳ ಒಗ್ಗೂಡುವಿಕೆಯು ಹೇಗೆ ಏಕತೆ ಸೂಚಿಸುತ್ತದೆಯೋ ಅದರಂತೆ ನಾವೆಲ್ಲರೂ ಒಗ್ಗಟ್ಟಿನಿಂದ ದೇಶದ ರಕ್ಷಣೆ ಮಾಡಬೇಕು.” ಎಂದರು.
    ಅಂಬಿಕಾ ವಿದ್ಯಾಲಯ ಸಿ. ಬಿ. ಎಸ್. ಇ. ಸಂಸ್ಥೆಯ ಸಂಸ್ಕೃತ ಉಪನ್ಯಾಸಕಿ ಶ್ರೀಮತಿ ಸಾರಿಕಾ ಇವರು ರಕ್ಷಾ ಬಂಧನದ ಮಹತ್ವವನ್ನು ತಿಳಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜ ಮತ್ತು ಪ್ರಾಂಶುಪಾಲೆ ಮಾಲತಿ ಡಿ. ಉಪಸ್ಥಿತರಿದ್ದರು.
    ಶಾಲಾ ವಿದ್ಯಾರ್ಥಿ ಆಕರ್ಷ್ ಸಂಸ್ಕೃತದ ಮಹತ್ವವನ್ನು ತಿಳಿಸಿದರು. ಇಂಚರ ಎಸ್‌. ಮಯ್ಯ ಹಾಗೂ ಹೃನ್ಮಯಿ ಪ್ರಾರ್ಥಿಸಿ, ಹಿತಾಲಿ ಪಿ. ಶೆಟ್ಟಿ ಸ್ವಾಗತಿಸಿ, ನಿಯತಿ ಭಟ್ ನಿರೂಪಿಸಿ, ಅದ್ವೈತ ಕೃಷ್ಣ ವಂದಿಸಿದರು

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ‘ಲಕ್ಷ್ಮೀ ಭಾಸ್ಕರ ಪ್ರಶಸ್ತಿ’ ಪ್ರದಾನ ಸಮಾರಂಭ  
    Next Article ಅಂಕೋಲಾ ಕ. ಸಾ. ಪ. ಹಾಗೂ ಮಿತ್ರ ಸಂಗಮದಿಂದ ದೇಶಭಕ್ತಿ ಗೀತೆಗಳ ಸ್ಪರ್ಧೆ ಹಾಗೂ ಸಾಹಿತಿಗಳ ಸಂವಾದ ಕಾರ್ಯಕ್ರಮ
    roovari

    Comments are closed.

    Related Posts

    ವಿಜಯಪುರದಲ್ಲಿ ವ್ಯಾಸರಾಯರ ಆರಾಧನೆ ಸಂಗೀತ ಗಮಕೋತ್ಸವ

    March 9, 2026

    ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ‘ಪ್ರೀತಿಯ ಸಖ್ಯ’ ಎಂಬ ವಿಶೇಷ ಕಾರ್ಯಕ್ರಮ

    March 9, 2026

    ದತ್ತಿನಿಧಿ ಪ್ರಾಯೋಜಿತ ಸ್ಪರ್ಧೆಗಳ ಫಲಿತಾಂಶ ಪ್ರಕಟ

    March 7, 2026

    ‘ಸಮಾಜ ಸೇವಾ ರತ್ನ ಪ್ರಶಸ್ತಿ’ಗೆ ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆ

    March 7, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.