ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಮಂಗಳೂರು ಇದರ ಆಶ್ರಯದಲ್ಲಿ ವಿಶ್ವಕರ್ಮ ಕಲಾ ಪರಿಷತ್ ಮಂಗಳೂರು ಆಯೋಜಿಸುವ ‘ವಿಶ್ವಕರ್ಮ ಕಲಾ ಸಿಂಚನ 2024’ ಕಾರ್ಯಕ್ರಮವು ದಿನಾಂಕ 15 ಡಿಸೆಂಬರ್ 2024ರಂದು ಪೂರ್ವಾಹ್ನ 9-00 ಗಂಟೆಯಿಂದ ಮಂಗಳೂರು ರಥಬೀದಿಯ ಪಟ್ಟೆ ಲಿಂಗಪ್ಪಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಕ್ತಿ ಸಿಂಚನ, ಜ್ಞಾನ ಸಿಂಚನ, ಚಿತ್ರ ಸಿಂಚನ ಮತ್ತು ಪ್ರತಿಭಾ ಸಿಂಚನ ಎಂಬ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಶ್ವಬ್ರಾಹ್ಮಣ ಸಮಾಜ ಬಾಂಧವರಿಗಾಗಿ ಕಲೆ, ಸಂಸ್ಕೃತಿ, ಪರಂಪರೆ, ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿದೆ. ನೋಂದಾವಣೆಗೆ ಕೊನೆಯ ದಿನಾಂಕ 08 ಡಿಸೆಂಬರ್ 2024 ಆಗಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಾವಣೆಗೆ 9482184197 ಸಂಪರ್ಕಿಸಿರಿ. ಸಂಜೆ 5-00 ಗಂಟೆಗೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ.