ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಇದರ ವತಿಯಿಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಶ್ರೀಮತಿ ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 23 ಫೆಬ್ರವರಿ 2025ರಂದು ಸಂಜೆ 5-00 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಪ್ರಶಸ್ತಿಯನ್ನು ತುಳು ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ನೀಡಿದ ಅನನ್ಯ ಸೇವೆಗಾಗಿ ನವೀನ್ ಡಿ. ಪಡೀಲ್ ಇವರಿಗೆ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಬಳಿಕ ಸದಾನಂದ ಸುವರ್ಣ ಇವರ ನಿರ್ದೇಶನದಲ್ಲಿ ಮಂಗಳೂರಿನ ಸುವರ್ಣ ಪ್ರತಿಷ್ಠಾನದವರು ‘ಕೋರ್ಟ್ ಮಾರ್ಷಲ್’ ನಾಟಕ ಪ್ರದರ್ಶನ ನೀಡಲಿದ್ದಾರೆ.