Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 10

    May 31, 2025

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ವಿಜಯʼ ವಿಶೇಷ ಉಪನ್ಯಾಸ
    Literature

    ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ವಿಜಯʼ ವಿಶೇಷ ಉಪನ್ಯಾಸ

    September 13, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಪುತ್ತೂರು : ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 131ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ʼವಿವೇಕ ವಿಜಯʼ ವಿಶೇಷ ಉಪನ್ಯಾಸ ಕಾರ್ಯಕ್ರಮವು ದಿನಾಂಕ 11 ಸೆಪ್ಟೆಂಬರ್ 2024ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು.
    ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಕೆ. ಎಮ್. ಕೃಷ್ಣ ಭಟ್‌ ಇವರು  ದೀಪಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು.ಸಮಾರಂಭದಲ್ಲಿ ‘ವಿವೇಕ – ವಿಜಯ’ ಉಪನ್ಯಾಸ ಕಾರ್ಯಕ್ರಮದ ಮೊದಲ ಹಂತವಾಗಿ ವಿದ್ಯಾರ್ಥಿಗಳಿಗಾಗಿ “ವಿವೇಕ ಚಿಂತನ – ಭಾರತ ವಂದನಾ” ಶೀರ್ಷಿಕೆಯಡಿ ಉಪನ್ಯಾಸ ನೀಡಿದ ಚಿಂತಕರು ಹಾಗೂ ಖ್ಯಾತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಮಾತನಾಡಿ “ಸಿಂಹಸದೃಶವಾದ ಹಿಂದೂಧರ್ಮಕ್ಕೆ ಪುನರ್ಜನ್ಮವನ್ನು ನೀಡಿದವರು ಸ್ವಾಮಿ ವಿವೇಕಾನಂದರು. ಹಿಂದೂಧರ್ಮವೆಂದರೆ ಅತ್ಯಂತ ಪ್ರಾಚೀನವಾದ ಹಾಗೂ ಶ್ರೇಷ್ಠವಾದ ಧರ್ಮ ಎಂದು ಜಗತ್ತಿನ ಕಣ್ಣಿನಲ್ಲಿ ಸಾಕ್ಷೀಕರಿಸಿದವರು ಸ್ವಾಮಿ ವಿವೇಕಾನಂದರು. ವ್ಯಕ್ತಿತ್ವದ ಅಮೂಲಾಗ್ರ ಬದಲಾವಣೆಯಾಗಲು ವಿವೇಕಾನಂದರ ಜೀವನವನ್ನು ಓದಿ ಪ್ರೇರಣೆಗೊಳ್ಳಬೇಕು. ಈ ಮಹಾನ್‌ ಸಂತನನ್ನು ಅಧ್ಯಯನ ಮಾಡಿದವರು ಹಾಗೂ ಅವರನ್ನು ಹೃದಯದಲ್ಲಿ ಇರಿಸಿಕೊಂಡವರು ಎಂದಿಗೂ ಸಾಮಾನ್ಯ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವಿಲ್ಲ. ಅವರ ಮಾತಿನ ಪ್ರೇರಣೆ ಪ್ರತೀಯೊಬ್ಬರ ವ್ಯಕ್ತಿತ್ವವನ್ನು ಬೆಳಗಿ ಆತನ ಅಂತ:ಶಕ್ತಿಯನ್ನು ಜಾಗೃತಗೊಳಿಸಬಲ್ಲದು. ಇಂದಿನ ಪೀಳಿಗೆಯು ಆವಶ್ಯವಾಗಿ ಸ್ವಾಮಿ ವಿವೇಕಾನಂದರ ಕೇಂದ್ರೀಕೃತ ಜೀವನಶೈಲಿ ಹಾಗೂ ಇಚ್ಛಾಶಕ್ತಿಯನ್ನು ಅಳವಡಿಸಿಕೊಳ್ಳಬೇಕು. ವಿವೇಕಾನಂದರು ಚಿಕಾಗೋದಲ್ಲಿ ನಡೆಸಿದ ಉಪನ್ಯಾಸದ 131ನೇ ವರ್ಷಾಚರಣೆಯ ಈ ದಿನವು ಪ್ರತೀ ವಿದ್ಯಾರ್ಥಿಯಲ್ಲಿಯೂ ಸಂಕಲ್ಪದಿನವಾಗಲಿ. ವಿದ್ಯಾರ್ಥಿಗಳು ತಮ್ಮ ಹೃದಯಗಳನ್ನು ತೆರೆದು ಈ ದೇಶ ಸಾಗುತ್ತಿರುವ ಹಾದಿಯನ್ನು ಮನದಟ್ಟು ಮಾಡಿಕೊಂಡು ತಮ್ಮ ಜೀವನ ಪಥವನ್ನು ಸ್ಪಷ್ಟಪಡಿಸಿಕೊಳ್ಳುವ ಆವಶ್ಯಕತೆ ಇದೆ.” ಎಂದರು.
    ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ  ಉಪಾಧ್ಯಕ್ಷರಾದ ಸತೀಶ್‌ರಾವ್‌, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ .ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿಗಳಾದ ರೂಪಲೇಖ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಸದಸ್ಯರಾದ ಡಾ. ಕೆ. ಎನ್‌. ಸುಬ್ರಹ್ಮಣ್ಯ, ವತ್ಸಲಾ ರಾಜ್ಞಿ, ಡಾ. ಕೃಷ್ಣ ಪ್ರಸನ್ನ, ಕೋಶಾಧಿಕಾರಿಗಳಾದ ಸಚಿನ್‌ ಶೆಣೈ, ಸಂಸ್ಥೆಯ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರಾದ ಎಮ್. ದೇವೀಚರಣ್‌ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.
     ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿನಿಯರು ಪ್ರೇರಣಾ ಗೀತೆಯಾಗಿ ಸನ್ಯಾಸಿ ಗೀತೆಯನ್ನು ಹಾಡಿದರು. ದ್ವಿತೀಯ ಪಿ. ಯು. ಸಿ. ವಿದ್ಯಾರ್ಥಿನಿಯರು ಪ್ರಾರ್ಥಿಸಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ರವೀಂದ್ರ ಪಿ. ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಉಪನ್ಯಾಸಕಿ ಮಮತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ದಿವ್ಯಾ ಕೆ. ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯ ವಿಮರ್ಶೆ – ನಾಟಕೀಯ ಆಯಾಮದ ಸುಧಾಮ ಚರಿತೆ –‘ಅಭಿವ್ಯಕ್ತಿ’ಯ ಹೊಸಪ್ರಯೋಗ
    Next Article ಯಕ್ಷದೇಗುಲದ ವತಿಯಿಂದ ನಡೆಯುವ ‘ಯಕ್ಷಗಾನ ಉತ್ಸವ’ದಲ್ಲಿ ಯಕ್ಷಗಾನ ನೃತ್ಯ ಸ್ಪರ್ಧೆ | ಅಕ್ಟೋಬರ್ 5
    roovari

    Comments are closed.

    Related Posts

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ವಿಶೇಷ ಲೇಖನ – ಜೈನ ಸಾಹಿತ್ಯದ ಖ್ಯಾತ ವಿದ್ವಾಂಸ ಡಾ. ಎಸ್. ಪಿ. ಪಾಟೀಲ್

    May 31, 2025

    ಉಪ್ಪಳದ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ತುಲುವೆರೆ ಕಲ ವರ್ಸೊಚ್ಚಯ | ಜೂನ್ 01

    May 30, 2025

    ಕೀನ್ಯಾದ ಪ್ರಸಿದ್ಧ ಲೇಖಕ ಗೂಗಿ ವಾ ಥಿಯಾಂಗೋ ವಿಧಿವಶ

    May 30, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.