ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 18, 19, 25 ಮತ್ತು 26 ಏಪ್ರಿಲ್ 2026ರಂದು (ಶನಿವಾರ ಮತ್ತು ಭಾನುವಾರ) ಸಂಜೆ 8-00 ಗಂಟೆಯಿಂದ 9-15ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಪುರಂದರದಾಸರ ಉಗಾಭೋಗಗಳೊಂದಿಗೆ ‘ದಾಸರಪದ’ಗಳನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.

