ಉಡುಪಿ : ಫ್ರಾನ್ಸಿಸ್ ದಾಂತಿ ಸ್ಮಾರಕ ಪ್ರತಿಷ್ಠಾನ ಮತ್ತು ಕಥೋಲಿಕ್ ಸಭಾ ಉಡುಪಿ ಪ್ರದೇಶದ ಆಶ್ರಯದಲ್ಲಿ ನೀಡಲಾಗುವ ರಾಜ್ಯಮಟ್ಟದ ದಿ. ಫ್ರಾನ್ಸಿಸ್ ದಾಂತಿ ಸ್ಮಾರಕ ಸಾಹಿತ್ಯ ಪುರಸ್ಕಾರ-2025ಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕವಯಿತ್ರಿ ಫ್ಲಾವಿಯಾ ಅಲ್ಬುಕರ್ಕ್ ಇವರ ‘ಸಖಿ ಸೂಸಿದ ಸೌಗಂಧ’ ಕವನ ಸಂಕಲನ ಆಯ್ಕೆಯಾಗಿದೆ.
ಪ್ರಶಸ್ತಿಯು ರೂ.25,000/- ನಗದನ್ನು ಒಳಗೊಂಡಿದ್ದು, ದಿನಾಂಕ 14 ಜೂನ್ 2026ರಂದು ಬೆಳಿಗ್ಗೆ 10-00 ಗಂಟೆಗೆ ಶಿರ್ವ ಆರೋಗ್ಯ ಮಾತಾ ಚರ್ಚ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೆಸ್ಲಿ ಕ್ಲಿಫರ್ಡ್ ಡಿ’ಸೋಜ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪುರಸ್ಕಾರ ಸಮಿತಿಯ ಅಲ್ಫೋನ್ಸ್ ಡಿ’ಕೋಸ್ತ ತಿಳಿಸಿದ್ದಾರೆ.
