ರಾಮನಗರ : 2023-2024ನೇ ಸಾಲಿನ ‘ಕೆ.ಪಿ. ಪೂರ್ಣಚಂದ್ರ ತೇಜಸ್ವಿ (ಪೂಚಂತೆ)ಯವರ ಸಾಹಿತ್ಯ ಪ್ರಶಸ್ತಿ’ಗೆ ಲೇಖಕರಿಂದ ಕನ್ನಡದ ಕೃತಿಗಳನ್ನು ಆಹ್ವಾನಿಸಲಾಗಿದೆ. 2023- 2024ರಲ್ಲಿ ಪ್ರಕಟವಾದ ಎಲ್ಲಾ ಪ್ರಕಾರದ ಕೃತಿಗಳನ್ನು ಪೂಚಂತೆ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು ಪೂಚಂತೆಯವರ ಪುಸ್ತಕಗಳು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.
ಪ್ರತಿಯೊಂದು ಶೀರ್ಷಿಕೆಯ ಮೂರು ಕೃತಿಗಳನ್ನು ಮಾರ್ಚ್ ಅಂತ್ಯದೊಳಗೆ ಲಿಖಿತ್ ಹೊನ್ನಾಪುರ, ಸುಗ್ಗನಹಳ್ಳಿ ಅಂಚೆ, ತಿಪ್ಪಸಂದ್ರ ಹೋಬಳಿ, ಮಾಗಡಿ ತಾಲೂಕು, ರಾಮನಗರ ಜಿಲ್ಲೆ – 561101 ಈ ಅಂಚೆ ವಿಳಾಸಕ್ಕೆ ಕಳುಹಿಸಲು ಕೋರುತ್ತೇವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ : 9353062539.