Subscribe to Updates

    Get the latest creative news from FooBar about art, design and business.

    What's Hot

    ಕೊಲ್ಯದ ನಾಟ್ಯನಿಕೇತನದಲ್ಲಿ ‘ನಾಟ್ಯಮೋಹನ ನವತ್ಯುತ್ಸವ’ – 18 | ಜೂನ್ 18

    June 17, 2025

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ‘ಪೆನ್ ಟು ಪ್ರೀಮಿಯರ್’ನಿಂದ ಮಹಿಳೆಯರಿಗಾಗಿ ಸಣ್ಣ ಕಥೆಗಳ ಸ್ಪರ್ಧೆ | ಆಗಸ್ಟ್ 31 ಕೊನೆಯ ದಿನ

    June 17, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 10
    Awards

    ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಜನವರಿ 10

    December 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ (ರಿ.)
    ಆಯೋಜಿಸುವ 2024-25ರ ಸಾಲಿನ ದತ್ತಿ ಪ್ರಶಸ್ತಿ ಮತ್ತು ಸಾಹಿತ್ಯ ಬಹುಮಾನಕ್ಕೆ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿದೆ.

    ಡಾ. ಸಾರಾ ಅಬೂಬಕ್ಕರ್ ದತ್ತಿ ಪ್ರಶಸ್ತಿ : ಸಂಘದ ಸದಸ್ಯೆಯಾಗಿದ್ದ ವೈಚಾರಿಕ ಮನೋಧರ್ಮದ ಸಂವೇದನಾಶೀಲ ಲೇಖಕಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಇವರ ಹೆಸರಿನಲ್ಲಿ ಪ್ರತಿ ವರ್ಷ ಕೊಡಮಾಡುವ ಸಾಹಿತ್ಯ ಪ್ರಶಸ್ತಿಗೆ ಈ ಬಾರಿ ‘ಲೇಖಕಿಯರಿಂದ ಅನುವಾದಿತ ಕಾದಂಬರಿ’ಗಳನ್ನು ಆಹ್ವಾನಿಸಲಾಗಿದೆ. 2022, 2023, 2024ರ ಸಾಲಿನಲ್ಲಿ ಪ್ರಕಟವಾದ ಯಾವುದೇ ಭಾಷೆಯಿಂದ ಕನ್ನಡಕ್ಕೆ ಲೇಖಕಿಯರು ಅನುವಾದಿಸಿ ಪ್ರಕಟಿಸಿದ ಕಾದಂಬರಿಯ ಮೂರು ಪ್ರತಿಗಳನ್ನು ದಿನಾಂಕ 10 ಜನವರಿ 2024ರ ಒಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು. ಪುಸ್ತಕದ ಜೊತೆಗೆ ವೈಯಕ್ತಿಕ ಮಾಹಿತಿ ಮತ್ತು ಸಂಪರ್ಕ ಸಂಖ್ಯೆಯಿರುವ ಪ್ರವೇಶ ಪತ್ರವನ್ನು ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ 97425 38833 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

    ಚಂದ್ರಭಾಗಿ ರೈ ದತ್ತಿ ಬಹುಮಾನ : ಕರಾವಳಿಯ ಮೊದಲ ತಲೆಮಾರಿನ ಹಿರಿಯ ಲೇಖಕಿ, ಸಂಘದ ಸದಸ್ಯೆಯೂ ಆಗಿದ್ದ ಚಂದ್ರಭಾಗಿ ರೈ ಇವರ ಹೆಸರಿನಲ್ಲಿ ಕೊಡಮಾಡುವ ಬಹುಮಾನಕ್ಕೆ ಈ ಬಾರಿ ‘ವೈಚಾರಿಕ ಲೇಖನ’ಗಳ ಸಂಕಲನದ ಹಸ್ತಪ್ರತಿಯನ್ನು ಆಹ್ವಾನಿಸಲಾಗಿದೆ. ಕನಿಷ್ಠ 30 ಲೇಖನಗಳಿರುವ ಅಪ್ರಕಟಿತ ಸಂಕಲನದ ಡಿಟಿಪಿ ಮಾಡಿದ ಮೂರು ಹಸ್ತಪ್ರತಿಯನ್ನು ದಿನಾಂಕ 10 ಜನವರಿ 2024ರ ಒಳಗೆ ತಲುಪುವಂತೆ ಸಂಘದ ವಿಳಾಸಕ್ಕೆ ಕಳುಹಿಸಬೇಕು. ಲೇಖನಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರಬಹುದು. ಬಹುಮಾನಕ್ಕೆ ಆಯ್ಕೆಯಾದ ಕೃತಿಯನ್ನು ಪ್ರಕಟಿಸುವಾಗ ‘ಚಂದ್ರಭಾಗಿ ರೈ ದತ್ತಿ ಬಹುಮಾನ ಪುರಸ್ಕೃತ’ ಎಂದು ಕಡ್ಡಾಯವಾಗಿ ಮುದ್ರಿಸಬೇಕು. ಸ್ಪರ್ಧಿಯ ಹೆ‌ಸರು ವಿಳಾಸ ಮತ್ತು ಸಂಪರ್ಕ ಸಂಖ್ಯೆ ಪ್ರತ್ಯೇಕ ಹಾಳೆಯಲ್ಲಿ ಲಗತ್ತಿಸಿರಬೇಕು. ಹೆಚ್ಚಿನ ಮಾಹಿತಿಗೆ 94813 92231 ಈ ಸಂಖ್ಯೆಯನ್ನು ಸಂಪರ್ಕಿಸಬಹುದು.

    ಪುಸ್ತಕ ಮತ್ತು ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕರಾವಳಿ ಲೇಖಕಿಯರ ಮತ್ತು ವಾಚಕಿಯರ ಸಂಘ, ‘ಸಾಹಿತ್ಯ ಸದನ’, ಅಂಚೆ ಕಚೇರಿ ಬಳಿ, ಉರ್ವಸ್ಟೋರ್, ಮಂಗಳೂರು -575006.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ದ ಸಮಾರೋಪ ಸಮಾರಂಭ
    Next Article ಭಾಗವತ ಲೀಲಾವತಿ ಬೈಪಡಿತ್ತಾಯ ವಿಧಿವಶ
    roovari

    Add Comment Cancel Reply


    Related Posts

    ವಿಶೇಷ ಲೇಖನ – ಶಿಕ್ಷಣ ತಜ್ಞ, ಸಂಸ್ಕೃತಿ ಚಿಂತಕ ಡಾ. ಜಿ. ರಾಮಕೃಷ್ಣ  

    June 17, 2025

    ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಗೌರವ ಸಲಹೆಗಾರರಾಗಿ ದೀಪಕ್ ಪೆರ್ಮುದೆ ಆಯ್ಕೆ

    June 17, 2025

    ಡಾ. ಸದಾನಂದ ಪೆರ್ಲಗೆ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

    June 17, 2025

    ಬಾಸುಮ ಕೊಡಗು ಇವರ ಕವನ ಸಂಕಲನ ಲೋಕಾರ್ಪಣೆ ಸಮಾರಂಭ | ಜೂನ್ 22

    June 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.