Subscribe to Updates

    Get the latest creative news from FooBar about art, design and business.

    What's Hot

    ಸ್ಟೇಜ್ ಬೆಂಗಳೂರು ಇವರ ವತಿಯಿಂದ ‘ಅಭಿನಯ ಕಾರ್ಯಾಗಾರ’ | ಜುಲೈ 07

    June 30, 2025

    ಬೆಳಗಾವಿಯ ಲೋಕಮಾನ್ಯ ರಂಗ ಮಂದಿರದಲ್ಲಿ ‘ಶರ್ಮಿಷ್ಠೆ’ ನಾಟಕ ಪ್ರದರ್ಶನ | ಜುಲೈ 05

    June 30, 2025

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ
    Competition

    ಮಡಿಕೇರಿಯಲ್ಲಿ ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆ

    June 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಡಿಕೇರಿ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಕುರಿತು ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಗಳನ್ನು ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ದಿನಾಂಕ 01-06-2024ರಂದು ಆಯೋಜಿಸಲಾಯಿತು.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ನಡೆದ ಪರಿಸರ ಸ್ಪರ್ಧಾ ಕಾರ್ಯಕ್ರಮಕ್ಕೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತಮಾಡಿದ ಅವರು, “ನಾವು ನೆಲ-ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ. ಪ್ರಾಕೃತಿಕ ಸಂಪನ್ಮೂಲ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕಿದೆ” ಎಂದರು.

    ವಿಶ್ವ ಪರಿಸರ ದಿನಾಚರಣೆಯ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್, “ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ಗಿಡಮರ, ನೆಲ-ಜಲ, ಪರಿಸರ, ಪ್ರಕೃತಿಯ ಮೇಲೆ ಪ್ರೇಮ ಮೂಡಿಸಿದರೆ ಭವಿಷ್ಯದಲ್ಲಿ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ” ಎಂದರು.

    ಪರಿಸರ ಸಂರಕ್ಷಣೆ ಮತ್ತು ಪರಿಸರ ಜಾಗೃತಿ ಆಂದೋಲನದ ಕುರಿತು ಇಕೋ-ಕ್ಲಬ್ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ ಕುಮಾರ್ ಮಾತನಾಡಿದರು. ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಬಿ.ಸಿ. ದೊಡ್ಡೇಗೌಡ, ಕ್ರೆಸೆಂಟ್ ಶಾಲೆಯ ಪ್ರಭಾರ ಪ್ರಾಂಶುಪಾಲೆ ಸುಲ್ಹತ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಸಂಸ್ಥೆಯ ಪ್ರಮುಖ ತರಬೇತುದಾರರಾದ ಕೆ.ಯು. ರಂಜಿತ್, ಮೈಥಿಲಿ ರಾವ್, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ, ಸಿ.ಆರ್.ಪಿ.ಗಳಾದ ಸಿ.ಡಿ. ಶೃತಿಶ್ರೀ, ಕಲ್ಪನಾ, ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸುಮಾರು 160ಕ್ಕೂ ಅಧಿಕ ಮಕ್ಕಳು ಚಿತ್ರಕಲೆ ಸ್ಪರ್ಧೆ ಮತ್ತು 30 ಮಕ್ಕಳು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಮಕ್ಕಳ ಪರಿಸರ ಜಾಗೃತಿ ಮೂಡಿಸುವ ಚಿತ್ರ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಸ್ಪರ್ಧೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳೊಂದಿಗೆ ಅಂಗನವಾಡಿ ಮಕ್ಕಳು, ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಮಕ್ಕಳು ಕೂಡಾ ಅತಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ಸಂರಕ್ಷಣೆ ಕುರಿತು ವೈವಿಧ್ಯಮಯ ಚಿತ್ರಗಳನ್ನು ರಚಿಸಿದ್ದು ಗಮನ ಸೆಳೆಯಿತು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವುದನ್ನು ಪರಿಸರ ನಾಶ, ಬರಗಾಲಕ್ಕೆ ಆಹ್ವಾನ ನಿರೂಪಿಸುವ ಚಿತ್ರ, ಅರಣ್ಯ ನಾಶ, ಮನುಷ್ಯನಿಂದ ಪ್ರಾಣ ಭಿಕ್ಷೆ ಬೇಡುತ್ತಿರುವ ವೃಕ್ಷ ದೇವತೆ, ಸುಂದರ ಪರಿಸರದ ರಮಣೀಯ ಚಿತ್ರಗಳು, ನೆಲ-ಜಲ, ಅರಣ್ಯ, ಜೀವ ವೈವಿಧ್ಯ ಹಾಗೂ ಪರಿಸರದ ವಿವಿಧ ಪ್ರಕಾರಗಳ ಕುರಿತು ಚಿತ್ರಗಳು ಮಕ್ಕಳ ಕುಂಚಗಳಲ್ಲಿ ಮೂಡಿ ಬಂದಿದ್ದು ಪರಿಸರ ಪ್ರಿಯರ ಗಮನ ಸೆಳೆಯಿತು. ಮಕ್ಕಳ ಕುಂಚದಿಂದ ಮೂಡಿಬಂದ ಪರಿಸರ ಚಿತ್ರಗಳನ್ನು ಮಡಿಕೇರಿ ನಗರದ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ಪ್ರದರ್ಶಿಸಲಾಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಡ್ಯದಲ್ಲಿ ‘ಡಾ. ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 9
    Next Article ಬೆಂಗಳೂರಿನಲ್ಲಿ ‘ಭಾನು ಗೀತ’ ಮತ್ತು ‘ಭಾವ ಸೌರಭ’ ಎಂಬ ಪುಸ್ತಕಗಳ ಲೋಕಾರ್ಪಣೆ | ಜೂನ್ 9
    roovari

    Add Comment Cancel Reply


    Related Posts

    ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನಿಂದ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ | ಜುಲೈ 06

    June 30, 2025

    ಕಡಲತಡಿಯ ಮನೆ ‘ಕನಸು’ವಿನಲ್ಲಿ ‘ವರ್ಷ ವೈಭವ’ ಸಾಹಿತ್ಯ ಕಾರ್ಯಕ್ರಮ

    June 28, 2025

    ಅರೆಭಾಷೆ ಕಥೆ, ಅಜ್ಜಿ ಕಥೆ, ಲೇಖನ, ಸಾಹಿತ್ಯ, ಲಲಿತ ಪ್ರಬಂಧ, ಕೃತಿಗಳ ಆಹ್ವಾನ | ಜುಲೈ 31

    June 28, 2025

    ಕೊಯ್ಯರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಉಪನ್ಯಾಸ-1

    June 28, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.