ಕಾರ್ಕಳ : ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಕಾರ್ಕಳದ ‘ಕುಂದಾಪ್ರದವರ್’ ಬಳಗದ ಸಹಯೋಗದಲ್ಲಿ ದಿನಾಂಕ : 17-07-2023ರಂದು ಪ್ರಕಾಶ್ ಹೊಟೇಲ್‌ನ ಉತ್ಸವ ಸಭಾಂಗಣದಲ್ಲಿ ಸಂಜೆ 4.30ಕ್ಕೆ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಜರಗಲಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಶ್ರೀ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಹಾಗೂ ಸಾಂಸ್ಕೃತಿಕ ಚಿಂತಕರಾದ ಶ್ರೀ ಓಂ ಗಣೇಶ್ ಉಪ್ಪುಂದ ಇವರು ‘ಭಾಷಿ ಅಲ್ಲ ಬದ್ಕ್’ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಲಿರುವರು. ‘ರಂಗ ಸಂಸ್ಕೃತಿ’ ಕಾರ್ಕಳದ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಪೈ, ವಾಲ್ತೂರು ಜನಪದ ಕಲಾವಿದರಾದ ಶ್ರೀ ನಾಗರಾಜ್ ಪಾಣಾರ, ಅಮಾಸೆಬೈಲು ರಂಗಭೂಮಿ ಕಲಾವಿದೆಯಾದ ಶ್ರೀಮತಿ ಪ್ರತಿಮಾ ನಾಯಕ್ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗರು ಆಶಯನುಡಿಗಳನ್ನಾಡಲಿರುವ ಈ ಕಾರ್ಯಕ್ರಮಕ್ಕೆ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕನ್ನಡಸಾಹಿತ್ಯ ಪರಿಷತ್ತು ಕಾರ್ಕಳ ಘಟಕ ಮತ್ತು ಕಾರ್ಕಳದ ಕುಂದಕನ್ನಡಿಗರು ತಮ್ಮೆಲ್ಲರಿಗೂ ಆದರದ ಸ್ವಾಗತವನ್ನು ಬಯಸಿದ್ದಾರೆ.