ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಾ. ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕತೆ ಬರೆಯುವ ಸ್ಪರ್ಧೆಯನ್ನು ನಗರದ ಮಹದೇವ ಪೇಟೆಯಲ್ಲಿರುವ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯಲ್ಲಿ ದಿನಾಂಕ 10 ಫೆಬ್ರುವರಿ 2026ರಂದು ಬೆಳಿಗ್ಗೆ 10-30 ಗಂಟೆಗೆ ಏರ್ಪಡಿಸಲಾಗಿದೆಯೆಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.
ಸ್ಪರ್ಧೆಗೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳಿಂದ ಓರ್ವ ಅಥವಾ ಇಬ್ಬರು ವಿದ್ಯಾರ್ಥಿಗಳನ್ನು ಕಳುಹಿಸಬಹುದು. ಕಥಾ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಹೆಸರನ್ನು ದಿನಾಂಕ 05 ಫೆಬ್ರುವರಿ 2026ರ ಒಳಗಾಗಿ ಮೊಬೈಲ್ ಸಂಖ್ಯೆ 9113892396 ಗೆ ವಾಟ್ಸಪ್ ಮೂಲಕ ಕಳುಹಿಸಬಹುದು ಅಥವಾ ಅಧ್ಯಕ್ಷರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ ಈ ವಿಳಾಸಕ್ಕೆ ಪತ್ರ ಮುಖೇನ ತಿಳಿಸಬೇಕಾಗಿ ಕ.ಸಾ.ಪ. ಜಿಲ್ಲಾಧ್ಯಕ್ಷರು ಕೋರಿದ್ದಾರೆ.
