Subscribe to Updates

    Get the latest creative news from FooBar about art, design and business.

    What's Hot

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಕಾಸರಗೋಡು ಜಿಲ್ಲೆಯ ಬಳ್ಳಪದವಿನಲ್ಲಿ ‘ನಾದ ಮಾಧುರಿ’ ಸಂಗೀತ ಕಾರ್ಯಾಗಾರ | ಮೇ 09ರಿಂದ 11

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ
    Literature

    ಖ್ಯಾತ ಸಾಹಿತಿ ನಾಡೋಜ ಕಮಲಾ ಹಂಪನಾ ನಿಧನ

    June 22, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲಾ ಹಂಪನಾ ಇವರು ದಿನಾಂಕ 22-06-2024 ರ ಶನಿವಾರದಂದು ರಾಜಾಜಿನಗರದ ಮನೆಯಲ್ಲಿ ಮಲಗಿದ್ದಲ್ಲಿಯೇ ಚಿರನಿದ್ರೆಗೆ ಜಾರಿದ್ದಾರೆ. ಇವರಿಗೆ 89ವರ್ಷ ವಯಸ್ಸಾಗಿತ್ತು.

    ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ. ಕಮಲಾ ಹಂಪನಾ ಇವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.

    ಡಾ. ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳು. ಇವಲ್ಲದೆ Attimabbe and Chalukyas, ಹಾಗೂ Jainism and Other Essays- ಎಂಬ ಎರಡು ಇಂಗ್ಲಿಷ್ ಪುಸ್ತಕ ಹಾಗೂ “ ಬೇರು ಬೆಂಕಿ ಬಿಳಲು “ ಬೃಹದ್ಗ್ರಂಥ ಕಮಲಾ ಹಂಪನಾ ಅವರ ಜೀವನಯಾನದ ಹೃದಯಸ್ಪರ್ಶಿ ಸಂಕಥನ.

    ಜೀವಪರ ಸಂವೇದನೆ, ಸಾಮಾಜಿಕ ಬದ್ಧತೆ, ಸಾಂಸೃತಿಕ ಕಾಳಜಿಯನ್ನು ಪ್ರಭಾವಶಾಲಿಯಾಗಿ ಬಿಂಬಿಸುವ ಕಮಲಾ ಹಂಪನಾ ಕನ್ನಡದ ಹೆಮ್ಮೆ. ಕರ್ನಾಟಕ ಸರ್ಕಾರ ಅವರ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದೆ. ಇವೆಲ್ಲದಕ್ಕೂ ಕಿರೀಟಪ್ರಾಯವೆಂಬಂತೆ ಜಗತ್ತಿನ ಅಯ್ದ ಆದರ್ಶ ಜೋಡಿಗಳನ್ನು ಆಧರಿಸಿ ಜರ್ಮನಿಯ ಯಾಸೇಮಿನ್ ನಿರ್ದೇಶಿಸಿರುವ ಅಂತರರಾಷ್ಟ್ರೀಯ ಸಾಕ್ಷ್ಯಚಿತ್ರದಲ್ಲಿ ಇಡೀ ಭಾರತದ ಪರವಾಗಿ ಕಮಲಾ-ಹಂಪನಾ ಜೋಡಿ ಆಯ್ಕೆಯಾಗಿ ಸೇರಿರುವುದು. ಅವರು ಪಟ್ಟ ಶ್ರಮ, ನಡಸಿದ ನಿರಂತರ ಹೋರಾಟ, ಮಾಡಿದ ಸಾಧನೆಗಳು ಹಲವಾರು. ಅವರ ಪರಿಶ್ರಮದ ಫಲವಾಗಿ 1.ಕರ್ನಾಟಕ ಸರ್ಕಾರ ಪ್ರತಿವರ್ಷ ಲೇಖಕಿಯೊಬ್ಬರಿಗೆ ಮೂರು ಲಕ್ಷ ರೂಪಾಯಿ ನಗದನ್ನು ಒಳಗೊಂಡಂತೆ ‘ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ’ಯನ್ನು ನೀಡುತ್ತಿದೆ. 2. ಮಹಿಳಾ ವಿಶ್ವವಿದ್ಯಾಲಯದ ಕನಸು ಸಾಕಾರಗೊಂಡಿತು. 3. ವೀರಮಹಿಳೆ ರಾಣಿ ಅಬ್ಬಕ್ಕದೇವಿಯ ಪ್ರತಿಮೆ ಪ್ರತಿಷ್ಠಾಪನೆಗೊಂಡಿತು.

    ಇವರು ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ 71ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಮುಂತಾದ ಅನೇಕ ಗೌರವ ಸನ್ಮಾನಗಳಿಗೆ ಭಾಜನರಾಗಿದ್ದಾರೆ.
    ಇವರು ಪತಿ ಖ್ಯಾತ ಸಾಹಿತಿ ಹಂಪ‌ ನಾಗರಾಜಯ್ಯ, ದೂರದರ್ಶನ ನಿರ್ದೇಶಕರಾದ ಎಚ್. ಎನ್. ಆರತಿ ಮತ್ತು ಬಂಧು ಮಿತ್ರರು, ಸೇರಿದಂತೆ ಅಪಾರ ಸಾಹಿತ್ಯಾಭಿಮಾನಿಗಳನ್ನು ಅಗಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Article‘ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟ ಕೇಂದ್ರ ಸಮಿತಿ ಅಸ್ತಿತ್ವಕ್ಕೆ
    Next Article ಮಂಗಳಗಂಗೋತ್ರಿಯಲ್ಲಿ ‘ಕನಕ ಸ್ಮೃತಿ’ | ಜೂನ್ 25
    roovari

    Add Comment Cancel Reply


    Related Posts

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    ಆಳ್ವಾಸ್‌ನ ಶಿವರಾಮ ಕಾರಂತ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

    May 7, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.