Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ‘ವಿವೇಕಸ್ಮೃತಿ’ ಉಪನ್ಯಾಸ ಕಾರ್ಯಕ್ರಮ

    June 12, 2025

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಭ್ರಾಮರಿ ‘ಯಕ್ಷ ವೈಭವ’ದಲ್ಲಿ ಯಕ್ಷ ಛಾಯಾಚಿತ್ರ ಪ್ರದರ್ಶನ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ
    Awards

    ಭ್ರಾಮರಿ ‘ಯಕ್ಷ ವೈಭವ’ದಲ್ಲಿ ಯಕ್ಷ ಛಾಯಾಚಿತ್ರ ಪ್ರದರ್ಶನ, ಪ್ರಶಸ್ತಿ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ

    August 7, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ಇದರ ವತಿಯಿಂದ ಏಳನೇ ವರ್ಷದ ‘ಭ್ರಾಮರಿ ಯಕ್ಷ ವೈಭವ 2024’, ಯಕ್ಷ ಛಾಯಾಚಿತ್ರ ಪ್ರದರ್ಶನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ದಿನಾಂಕ 03 ಆಗಸ್ಟ್ 2024ರಂದು ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದವು.

    ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಜಾನಪದ ವಿ.ವಿ. ವಿಶ್ರಾಂತ ಕುಲಪತಿ ಪ್ರೊ. ಕೆ. ಚಿನ್ನಪ್ಪ ಗೌಡ ಇವರು “ಯಕ್ಷಗಾನದಲ್ಲಿ ಗಾನ ವೈಭವ, ನಾಟ್ಯ ವೈಭವ ಪ್ರಧಾನವಾಗದೇ ಪರಂಪರೆ ಉಳಿಯಬೇಕು. ಈ ನಿಟ್ಟಿನಲ್ಲಿ ಎಲ್ಲಾ ಮೇಳದ ಕಲಾವಿದರು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಸಮಾವೇಶ ನಡೆಸಿ, ಯಕ್ಷಗಾನದ ಪರಂಪರೆ ಉಳಿಸುವ ನಿಟ್ಟಿನಲ್ಲಿ ವಿಚಾರ ವಿಮರ್ಶೆ ನಡೆಸಬೇಕು. ಯಕ್ಷಗಾನ ಕಲಾವಿದರು ಕೇವಲ ಕಲಾವಿದರಲ್ಲ, ಅವರು ಯಕ್ಷಗಾನದ ವಿದ್ವಾಂಸರೂ ಆಗಿದ್ದಾರೆ. ಆಯಾ ವರ್ಷದ ತಿರುಗಾಟದ ಬಗ್ಗೆ ವಿಮರ್ಶೆ ನಡೆದಾಗ ಎಲ್ಲಿ ತಪ್ಪಿದ್ದೇವೆ ಎಂಬುದು ತಿಳಿಯುತ್ತದೆ. ಕಲಾವಿದರು ಪ್ರದರ್ಶನಕ್ಕೆ ಮುನ್ನ ಪರಸ್ಪರ ಸಮಾಲೋಚನೆ ನಡೆಸಿ, ಪರಂಪರೆ ಗಟ್ಟಿಗೊಳಿಸಬೇಕು. ಸಮಾಜಕ್ಕೆ ನೈತಿಕತೆಯನ್ನು ಕಟ್ಟಿಕೊಡುವ ಏಣಿಯಾದ ಯಕ್ಷಗಾನದ ಸಂಕೀರ್ಣ ಪರಂಪರೆ ಉಳಿಸಬೇಕು” ಎಂದು ಹೇಳಿದರು.

    ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಮಂಗಳೂರು ನಗರದ ಹೃದಯಭಾಗದಲ್ಲಿ ಪ್ರತಿವರ್ಷ ರಾತ್ರಿಪೂರ್ತಿ ಯಕ್ಷಗಾನ ಪ್ರದರ್ಶನ ಏರ್ಪಡಿಸುತ್ತಿರುವ ಭ್ರಾಮರಿ ಯಕ್ಷಮಿತ್ರರು ಸಂಘಟನೆಯ ಕಾರ್ಯ ಶ್ಲಾಘನೀಯ. ಯಕ್ಷಗಾನದ ಸಂದೇಶ ಇಂದಿನ ಜನತೆಗೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭ್ರಾಮರಿ ಯಕ್ಷಮಿತ್ರರು ಸಂಘಟನೆಗೆ ಮಂಗಳೂರು ಮಹಾನಗರ ಪಾಲಿಕೆ ಎಲ್ಲ ಸಹಕಾರ ನೀಡಲಿದೆ” ಎಂದರು.

    ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ ಕಲ್ಕೂರ ಮಾತನಾಡಿ, “ತೌಳವ ನಾಡಿನಲ್ಲಿ ಯಕ್ಷಗಾನಕ್ಕೆ ವಿಶೇಷ ಆದ್ಯತೆ ಇದೆ. ಯಕ್ಷಗಾನವನ್ನು ಉಳಿಸುವ ಕಾರ್ಯವನ್ನು ಎಲ್ಲರೂ ಜತೆಸೇರಿ ಮಾಡಬೇಕಿದೆ” ಎಂದರು. ಶಾಸಕ ವೇದವ್ಯಾಸ ಕಾಮತ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್ ಶುಭಾಸಂಶನೆ ಮಾಡಿದರು.

    ಇದೇ ಸಂದರ್ಭದಲ್ಲಿ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆಯವರಿಗೆ ‘ಭ್ರಾಮರೀ ಯಕ್ಷಮಣಿ’ ಪ್ರಶಸ್ತಿ, ಕೈರಂಗಳದ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ಮನೋಹರ ಎಸ್. ಕುಂದರ್ ಎರ್ಮಾಳ್ ಬಡಾ ಇವರಿಗೆ ‘ಭ್ರಾಮರಿ ಯಕ್ಷಸೇವಾ’ ಪುರಸ್ಕಾರ ಪ್ರದಾನ ಮಾಡಲಾಯಿತು. ಮನೋಹರ ಕುಂದರ್ ಅವರ ಅಪೂರ್ವ ಯಕ್ಷಛಾಯಾಚಿತ್ರಗಳ ಪ್ರದರ್ಶನ ನಡೆಯಿತು.

    ಭ್ರಾಮರಿ ಯಕ್ಷಮಿತ್ರರು ಮಂಗಳೂರು ಟ್ರಸ್ಟಿನ ಸತೀಶ್ ಮಂಜೇಶ್ವರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಿನಯಕೃಷ್ಣ ಕುರ್ನಾಡು ವಂದಿಸಿ, ಗುರುರಾಜ ಹೊಳ್ಳ ಬಾಯಾರು ಕಾರ್ಯಕ್ರಮ ನಿರೂಪಿಸಿದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಪಂಚವಟಿ, ಕಂಸ ವಿವಾಹ, ಸುಧನ್ವ ಮೋಕ್ಷ ಮತ್ತು ಮಹಿರಾವಣ ಕಾಳಗ ಯಕ್ಷಗಾನ ಉಚಿತವಾಗಿ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಅನ್ನಪೂರ್ಣ ನಿಲಯದಲ್ಲಿ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 10
    Next Article ಹಿರಿಯ ಪತ್ರಕರ್ತ ಜಯಕರ ವಿ. ಸುವರ್ಣ ನಿಧನ
    roovari

    Comments are closed.

    Related Posts

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿಯವರಿಗೆ ಗೌರವ ಸಮರ್ಪಣೆ

    June 12, 2025

    ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಇದರ ವತಿಯಿಂದ ಉಚಿತ ಯಕ್ಷಗಾನ ತರಬೇತಿ | ಜೂನ್ 14

    June 12, 2025

    ತೆಕ್ಕಟ್ಟೆ ಹಯಗ್ರೀವದಲ್ಲಿ ‘ಯಕ್ಷ ನುಡಿಸಿರಿ ಬಳಗ’ಕ್ಕೆ ಸನ್ಮಾನ

    June 12, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.