ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗವು ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ‘ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’ಗೆ ಹಿರಿಯ ಯಕ್ಷಗಾನ ಕಲಾವಿದ ಹಾಗೂ ವಿದ್ವಾಂಸರಾದ ಗುರುರಾಜ ಮಾರ್ಪಳ್ಳಿ ಆಯ್ಕೆಯಾಗಿದ್ದಾರೆ.
ಮಾರ್ಪಳ್ಳಿಯವರು ಯಕ್ಷಗಾನವಲ್ಲದೆ ನಾಟಕ, ಸಿನೇಮಾ, ಸಂಗೀತಾ, ಶಿಲ್ಪ ಮತ್ತು ಸಾಹಿತ್ಯ ಹೀಗೆ ಕಲೆಯ ಬಹು ಆಯಾಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಬಹುಮುಖೀ ಕಲಾಸಾಧಕರಾಗಿದ್ದಾರೆ. ಪ್ರಶಸ್ತಿಯು ಪ್ರಶಸ್ತಿ ಪರಿಕರ ಸಹಿತ ರೂಪಾಯಿ 40,000/- ನಗದು ಪುರಸ್ಕಾರವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ 19-05- 2024ರ ಭಾನುವಾರದಂದು ಯಕ್ಷಗಾನ ಕಲಾರಂಗದ ನೂತನ ಕಟ್ಟಡದ ಐವೈಸಿ ಸಭಾಂಗಣದಲ್ಲಿ ಪ್ರಶಸ್ತಿ ಸ್ಥಾಪಕ ತಲ್ಲೂರು ಫ್ಯಾಮಿಲಿ ಟ್ರಸ್ಟಿನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಉಪಸ್ಥಿತಿಯಲ್ಲಿ ಅತಿಥಿ ಗಣ್ಯರ ಸಮಕ್ಷಮದಲ್ಲಿ ನಡೆಯಲಿದೆ.