Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ನಾಟಕ ಅಕಾಡೆಮಿಯ ಅಕಾಡೆಮಿ ರತ್ನ, ಅಕಾಡೆಮಿ ಮತ್ತು ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪ್ರಕಟ

    June 18, 2026

    ಬೆಂಗಳೂರಿನ ರಮಣ ಮಹರ್ಷಿ ಹೆರಿಟೇಜ್ ಸಭಾಂಗಣದಲ್ಲಿ ವಿಶ್ವ ಸಂಗೀತ ದಿನಾಚರಣೆ | ಜೂನ್ 20 ಮತ್ತು 21

    June 18, 2026

    ಬೆಂಗಳೂರಿನ ನಾಣಿ ಅಂಗಳದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 21

    June 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ
    Yakshagana

    ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಮಹಿಳಾ ಘಟಕದ ವಾರ್ಷಿಕೋತ್ಸವ

    January 11, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಪುಂಜಾಲಕಟ್ಟೆ ಘಟಕ ಹಾಗೂ ಮಹಿಳಾ ಘಟಕದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಬಂಟ್ವಾಳ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ದಿನಾಂಕ 25-12-2023ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ನ್ಯಾಯಾಧೀಶರಾದ ದಿನೇಶ್‌ ಹೆಗ್ಡೆ ಬದ್ಯಾರು ಅವರು ಮಾತನಾಡಿ “ಯಕ್ಷಗಾನದಲ್ಲಿ ದೊಡ್ಡ ಕ್ರಾಂತಿಯನ್ನು ಮಾಡಿರುವ ಪಟ್ಲ ಸತೀಶ್ ಶೆಟ್ಟಿಯವರು ಕಲಾವಿದರಿಗೊಂದು ಶಕ್ತಿಯಾಗಿದ್ದಾರೆ. ಯಕ್ಷಗಾನದಿಂದ ಜ್ಞಾನದ ವೃದ್ಧಿಯಾಗುತ್ತಿದ್ದು, ಮಕ್ಕಳಲ್ಲು ಯಕ್ಷಗಾನದ ಅಭಿರುಚಿ ಮೂಡಿಸುವ ನಿಟ್ಟಿನಲ್ಲಿ ಪೋಷಕರು ಪ್ರೋತ್ಸಾಹಿಸಬೇಕು” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ಯಕ್ಷಗಾನದಲ್ಲು ಸಾಕಷ್ಟು ಪರಿವರ್ತನೆ ಕಂಡಿದೆ. ಇತ್ತೀಚಿನ ದಿನಗಳಲ್ಲಿ ನ್ಯಾಯಾಲಯದ ಅವರಣದಲ್ಲಿ ಯಕ್ಷಗಾನ ಪ್ರದರ್ಶನ ನಡೆಯುತ್ತಿರುವುದು ಹೊಸ ಬೆಳವಣಿಗೆಯಾಗಿದೆ. ಪಟ್ಲ ಫೌಂಡೇಶನ್‌ನ ಪುಂಜಾಲಕಟ್ಟೆ ಘಟಕ ಯಕ್ಷ ಶಿಕ್ಷಣದ ಮೂಲಕ ಮಕ್ಕಳನ್ನು ಯಕ್ಷಗಾನದಲ್ಲಿ ತೊಡಗಿಸಿರುವುದು ಶ್ಲಾಘನೀಯವಾಗಿದೆ. ಸರಕಾರಿ ಮತ್ತು ಖಾಸಗಿ ಸಹಿತ ಒಟ್ಟು 40 ಶಾಲೆಗಳ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣದ ಮೂಲಕ ಉಚಿತ ಯಕ್ಷಗಾನ ತರಬೇತಿ ನೀಡಲಾಗುತ್ತಿದ್ದು, ಜನವರಿ 28ರಂದು ಮೂಡಬಿದ್ರೆಯಲ್ಲಿ ಇದಕ್ಕೆ ಚಾಲನೆ ನೀಡಲಾಗುತ್ತಿದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಸ್ಕಾರ, ಸಂಸ್ಕೃತಿ ನೀಡುವಲ್ಲಿ ಪೋಷಕರ ಜೊತೆ ಸಮಾಜದ ಪ್ರೋತ್ಸಾಹವು ಅಗತ್ಯವಿದೆ” ಎಂದರು.

    ಜಿ.ಪಂ. ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ, ಉದ್ಯಮಿ ನಾಗೇಶ್ ಪ್ರಭು, ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷ ಅಜಿತ್‌ ಶೆಟ್ಟಿ ಕಾರಿಂಜ, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಗೌರವಾಧ್ಯಕ್ಷ ಪುರುಷೋತ್ತಮ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಉಮಾ ಡಿ. ಗೌಡ, ಗೌರವಾಧ್ಯಕ್ಷೆ ಲಕ್ಷ್ಮೀ ಸಂಜೀವ ಶೆಟ್ಟಿ, ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಕಾಜಲ ವಿಶ್ವನಾಥ ಪೂಜಾರಿ ಮತ್ತು ದಿವಾಕರ ದಾಸ್ ಕಾವಳಕಟ್ಟೆ ಅವರನ್ನು ಸನ್ಮಾನಿಸಲಾಯಿತು. ಯಕ್ಷಗುರು ದೇವಿಪ್ರಸಾದ್ ಆಚಾರ್ಯ ಹಾಗೂ ಸಹಕರಿಸಿದವರನ್ನು ಗೌರವಿಸಲಾಯಿತು.

    ಘಟಕದ ಅಧ್ಯಕ್ಷ ಯಶೋಧರ ಶೆಟ್ಟಿ ಸ್ವಾಗತಿಸಿ, ಉದಯ ಕುಮಾರ್ ಶೆಟ್ಟಿ ವಂದಿಸಿ, ಪತ್ರಕರ್ತ ರತ್ನದೇವ್ ಪುಂಜಾಲಕಟ್ಟೆ ನಿರೂಪಿಸಿದರು. ಮಧ್ಯಾಹ್ನ ಘಟಕದ ವಿದ್ಯಾರ್ಥಿಗಳಿಂದ ‘ಶ್ವೇತ ಕುಮಾರ ಚರಿತ್ರೆ ಮತ್ತು ಸಂಜೆ ಪಾವಂಜೆ ಮೇಳದವರಿಂದ ‘ಶ್ರೀ ದೇವೀ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಬನಾರಿ ಯಕ್ಷಗಾನ ಸಂಘದ 79ನೇ ವಾರ್ಷಿಕೋತ್ಸವದಲ್ಲಿ ಪದ್ಯಾಣ ಶಂಕರನಾರಾಯಣ ಭಟ್ಟರಿಗೆ ‘ಕೀರಿಕ್ಕಾಡು ಪ್ರಶಸ್ತಿ’ ಪ್ರದಾನ
    Next Article ಕಾರ್ಕಳದಲ್ಲಿ ಅರಿವು-ತಿಳಿವು ಉಪನ್ಯಾಸ ಕಾರ್ಯಕ್ರಮ
    roovari

    Add Comment Cancel Reply


    Related Posts

    ಸಂಗೀತ ನಾಟಕ ಅಕಾಡೆಮಿಯ ಅಕಾಡೆಮಿ ರತ್ನ, ಅಕಾಡೆಮಿ ಮತ್ತು ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ ಪ್ರಕಟ

    June 18, 2026

    ರಾಜ್ಯದ ಹತ್ತು ಸಾಧಕರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಗೌರವ

    June 17, 2026

    ಮಾಹೆಯಿಂದ ಯಕ್ಷಗಾನ ಕಲಾರಂಗಕ್ಕೆ ಮನೆಗಳ ಕೊಡುಗೆ

    June 17, 2026

    ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ತಾಳಮದ್ದಳೆ ಸರಣಿ ಕಾರ್ಯಕ್ರಮಕ್ಕೆ ಚಾಲನೆ

    June 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.