ದೆಹಲಿ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕ ಮತ್ತು ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಬೆಳ್ಳಾರೆ ಆಯೋಜಿಸುವ ‘ಯಕ್ಷಧ್ರುವ ಪಟ್ಲ ಸಂಭ್ರಮ 2023’ವು ದಿನಾಂಕ 30-09-2023ರಂದು ದೆಹಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಪ್ರಧಾನ ಸಂಚಾಲಕರಾದ ಶ್ರೀ ಶಶಿಧರ ಶೆಟ್ಟಿ ಬರೋಡ ಇವರು ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಚಲನ ಚಿತ್ರನಟ ಶ್ರೀ ದಯಾನಂದ ಶೆಟ್ಟಿಯವರು ಭಾಗವಹಿಸಲಿರುವರು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದರಾದ ಅರುವ ಕೊರಗಪ್ಪ ಶೆಟ್ಟಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಜಯರಾಮ ಬನಾನ್ ಮತ್ತು ದೆಹಲಿ ಕನ್ನಡ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಡೇರೆಲ್ ಜೆಸ್ಸಿಕಾ ಫೆರ್ನಾಂಡಿಸ್ ಇವರುಗಳನ್ನು ಸನ್ಮಾನಿಸಲಾಗುವುದು.
ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಇವರಿಂದ ‘ಮಾಯಾ ಮೋಹಿನಿ’ ಮತ್ತು ‘ವೀರ ಭಾರ್ಗವ’ ಯಕ್ಷಗಾನ ಪ್ರದರ್ಶನ ಹಾಗೂ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಬೆಳ್ಳಾರೆ ಇವರಿಂದ ‘ಪಜ್ಜೆ ಗೆಜ್ಜೆ’ ತುಳು, ಕನ್ನಡ ಜಾನಪದ ಮತ್ತು ಶಾಸ್ತ್ರೀಯ ನೃತ್ಯ ಪ್ರದರ್ಶನವಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದೆಹಲಿ ಘಟಕ ಮತ್ತು ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಬೆಳ್ಳಾರೆ ಇದರ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಈ ಕಾರ್ಯಕ್ರಮಕ್ಕೆ ತಮಗೆಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.