Subscribe to Updates

    Get the latest creative news from FooBar about art, design and business.

    What's Hot

    ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳ ಖ್ಯಾತ ತಂಡಗಳಿಂದ ‘ಶಿವಗಾನಾಮೃತ’ ಭಜನೆ ಸೇವೆ ಸುಸಂಪನ್ನ

    February 16, 2026

    ಕವಿ ಸುಬ್ರಾಯ ಚೊಕ್ಕಾಡಿಯವರಿಗೆ ಪ್ರೊ. ಎಸ್‌.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ ಪ್ರದಾನ

    February 16, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-2023-24’
    Competition

    ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ-2023-24’

    February 12, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದಿರೆ (ವಿದ್ಯಾಗಿರಿ ) : ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಯಕ್ಷಗಾನ ಕಲೆಯಾಧಾರಿತ ರಾಜ್ಯಮಟ್ಟದ ಸ್ಪರ್ಧೆ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ ಕಾರ್ಯಕ್ರಮವು ದಿನಾಂಕ 06-02-2024ರ ಮಂಗಳವಾರದಂದು ವಿದ್ಯಾಗಿರಿಯ ಮುಂಡ್ರೆದಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ) ಸಭಾಂಗಣದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ “ಯಕ್ಷಗಾನವನ್ನು ಒಂದು ಪರಿಪೂರ್ಣ ಕಲೆಯನ್ನಾಗಿ ಮಾಡುವ ಮಹತ್ಕಾರ್ಯವನ್ನು ಕಲಾವಿದರು, ಭಾಗವತರು ಹಾಗೂ ವೇಷಧಾರಿಗಳು ಮಾಡುತ್ತಿದ್ದಾರೆ. ಇವರ ಕೊಡುಗೆಯಿಂದ ಯಕ್ಷಗಾನ ಅತ್ಯುನ್ನತ ಸ್ಥಾನಕ್ಕೆ ಏರಿದೆ. ಸಂಗೀತ, ಭಾಗವತಿಗೆ, ಹಿಮ್ಮೇಳ, ವೇಷಭೂಷಣ, ನೃತ್ಯಗಳನ್ನು ಒಳಗೊಂಡ ಸರ್ವ ಗುಣ ಸಂಪನ್ನವಾದಂತಹ ಕಲೆ ಯಕ್ಷಗಾನ. ಪಟ್ಲ ಸತೀಶ್ ಶೆಟ್ಟಿ ಕೇವಲ ಕಲಾವಿದ ಮಾತ್ರವಲ್ಲ. ಪಟ್ಲ ಫೌಂಡೇಶನ್ ಸ್ಥಾಪಿಸಿ ಅನೇಕ ಕಲಾವಿದರಿಗೆ ಬದುಕು ಕಟ್ಟಿಕೊಡುತ್ತಿದ್ದಾರೆ.” ಎಂದು ಅಭಿನಂದಿಸಿದರು.

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಮೂಡಬಿದಿರೆಯ ಶಾಸಕ ಉಮಾನಾಥ್ ಎ. ಕೋಟ್ಯಾನ್ ಮಾತನಾಡಿ “ಪ್ರತಿಭಾವಂತ ಮತ್ತು ಆಸಕ್ತಿ ಹೊಂದಿದ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಬೇಕು. ಈ ಸದುದ್ದೇಶದಿಂದ ಪಟ್ಲ ಫೌಂಡೇಶನ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ. ನಮ್ಮ ಜೀವನಕ್ಕೆ ಬೇಕಾದ ಅಮೂಲ್ಯ ವಿಷಯಗಳನ್ನು ಅರಿತುಕೊಳ್ಳಲು ಯಕ್ಷಗಾನ ಒಳ್ಳೆಯ ಮಾಧ್ಯಮ. ನಮ್ಮ ಪೂರ್ವಜರು ಅನಕ್ಷರಸ್ಥರಾಗಿದ್ದರೂ, ರಾಮಾಯಣ ಹಾಗೂ ಮಹಾಭಾರತದ ಕಥೆಗಳನ್ನು ತಿಳಿದುಕೊಂಡು ಮಕ್ಕಳಿಗೆ ತಿಳಿಸುತ್ತಿದ್ದರು. ಏಕೆಂದರೆ ಅವರು ಯಕ್ಷಗಾನವನ್ನು ನೋಡಿ ಅದನ್ನು ಅನುಭವಿಸುತ್ತಿದ್ದರು. ಪೌರಾಣಿಕ ಕಥೆಗಳನ್ನು ಅರ್ಥ ಮಾಡಿಕೊಳ್ಳಲು ಯಕ್ಷಗಾನವು ಸಹಕಾರಿ. ಯಕ್ಷಧ್ರುವ ಪಟ್ಲ ಹಾಗೂ ಆಳ್ವಾಸ್ ಈ ಕಾರ್ಯಕ್ರಮ ಮಾಡಿರುವುದು ಪುಣ್ಯದ ಕಾರ್ಯ.” ಎಂದು ಶ್ಲಾಘಿಸಿದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ “ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸುವುದು ಸರ್ವಶ್ರೇಷ್ಠ ಕೆಲಸ. ವಿದ್ಯಾರ್ಥಿಗಳಿಗೆ ವಿದ್ಯೆ ಮತ್ತು ಬುದ್ಧಿಯ ಜೊತೆಗೆ ಯಕ್ಷಗಾನದ ಪರಿಚಯ ಮಾಡಿಸುವುದು ನಮ್ಮ ಕರ್ತವ್ಯ. ಪಟ್ಲ ಸತೀಶ್ ಶೆಟ್ಟಿ ಅವರಂತಹ ಭಾಗವತ ಹಾಗೂ ಯಕ್ಷ ಕಲಾವಿದರು, ಯಕ್ಷಗಾನದಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಅನೇಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ ನೀಡಿ, ಸಮಾಜಕ್ಕೆ ಕೊಡುಗೆ ನೀಡುತ್ತಿದ್ದಾರೆ. 2015ರಲ್ಲಿ ಪ್ರಾರಂಭವಾದ ಯಕ್ಷ ಧ್ರುವ ಫೌಂಡೇಶನ್ ರಾಜ್ಯದಲ್ಲಿ 39 ಘಟಕಗಳನ್ನು ಒಳಗೊಂಡಿದೆ. ಯಕ್ಷ ಶಿಕ್ಷಣ ನೀಡುವುದರಿಂದ ಮಕ್ಕಳಲ್ಲಿ ಸೌಂದರ್ಯ ಪ್ರಜ್ಞೆಯನ್ನು ಮೂಡಿಸಿದಂತಾಗುತ್ತದೆ. ಯಕ್ಷಗಾನವನ್ನು ಕಲಿತ ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಬಲ ಹಾಗೂ ಅರ್ಥಪೂರ್ಣವಾಗಿ ಮೂಡಿಬಂದಿರುತ್ತದೆ. ಕನ್ನಡ ಭಾಷೆಯನ್ನು ಕಟ್ಟುವಲ್ಲಿ ಯಕ್ಷಗಾನ ಮಹತ್ಕಾರ್ಯವನ್ನು ಮಾಡುತ್ತಿದೆ.” ಎಂದರು.

    ಇದೇ ಸಂದರ್ಭದಲ್ಲಿ ಯಕ್ಷಗಾನದ ಸವ್ಯಸಾಚಿ ಬುಟ್ಟಿಕೆರೆ ಪುರುಷೋತ್ತಮ ಪೂಂಜಾ ಅವರ ಪತ್ನಿ ಶೋಭಾ ಪುರುಷೋತ್ತಮ ಪೂಂಜ ಅವರನ್ನು ಗೌರವಿಸಲಾಯಿತು. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಂಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಭಂಡಾರಿ ಕಾರ್ಯಕ್ರಮ ನಿರೂಪಿಸಿ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ್ ಶೆಟ್ಟಿ ವಂದಿಸಿದರು.

    ಮೂಡುಬಿದಿರೆಯ ಉದ್ಯಮಿ ಕೆ. ಶ್ರೀಪತಿ ಭಟ್, ಫೌಂಡೇಷನ್ ಟ್ರಸ್ಟ್ ಪದಾಧಿಕಾರಿಗಳಾದ ಪುರುಷೋತ್ತಮ ಕೆ. ಭಂಡಾರಿ, ದಿವಾಕರ್ ರಾವ್, ಡಾ. ಮನು ರಾವ್, ಸುದೇಶ್ ಕುಮಾರ್ ರೈ, ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ ಶೆಟ್ಟಿ, ದಿವಿತ್ ಕೋಟ್ಯಾನ್, ಪಣಂಬೂರು ವಾಸುದೇವ ಐತಾಳ್, ಪ್ರೋ ಎಮ್.ಎಲ್. ಸಾಮಗ, ಕದ್ರಿ ಪ್ರದೀಪ್ ಆಳ್ವ ಉಪಸ್ಥಿತರಿದ್ದರು.

    ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು. ಈ ಕಾರ್ಯಕ್ರಮದಲ್ಲಿ ಒಂದೇ ಬಾರಿ 1650ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಯಕ್ಷರೂಪಕದ ಮೂಲಕ ರಂಗ ಪ್ರವೇಶ ಮಾಡಿದ್ದು ಎಲ್ಲರ ಗಮನ ಸೆಳೆಯಿತು. ಅವಿಭಜಿತ ದಕ್ಷಿಣ ಕನ್ನಡ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಂದ ಒಟ್ಟು 2074ಕ್ಕೂ ಅಧಿಕ ವಿದ್ಯಾರ್ಥಿಗಳು ಏಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡರು.

    Share. Facebook Twitter Pinterest LinkedIn Tumblr WhatsApp Email
    Previous Articleಜೀವನ ರಾಮ್ ಸುಳ್ಯ ಹಾಗೂ ನರೇಶ್ ಡಿಂಗ್ರಿಗೆ ಸೆಂಟರ್ ಸ್ಟೇಜ್ ಕಪ್ಪಣ್ಣ ಸಾಂಸ್ಕೃತಿಕ ಪ್ರಶಸ್ತಿ
    Next Article ಪುತ್ತೂರಿನ ಬಾಲವನದಲ್ಲಿ ಬಹುಮಾನ ವಿತರಣೆ ಕಾರ್ಯಕ್ರಮ
    roovari

    Add Comment Cancel Reply


    Related Posts

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಪಾಕ್ಷಿಕ ತಾಳಮದ್ದಳೆ ಕೂಟ

    February 16, 2026

    ಯಕ್ಷಗಾನ ಕೇಂದ್ರದಲ್ಲಿ ‘ದೊಂದಿ ಬೆಳಕಿನ ಯಕ್ಷಗಾನ’

    February 14, 2026

    ಸೈಂಟ್ ಮೇರಿಸ್ ಶಾಲೆಯಲ್ಲಿ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’ ಸಾಹಿತ್ಯ ಅಭಿಯಾನ

    February 14, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.