ಬೆಳ್ತಂಗಡಿ : ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತರಾದ ಸತೀಶ್ ಆಚಾರ್ಯ ವೇಣೂರು ವಿಧಿವಶರಾಗಿದ್ದಾರೆ. ದಿನಾಂಕ 31ರ ಮಾರ್ಚ್ ನಸುಕಿನ ಜಾವ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಇಹಲೋಕ ತ್ಯಜಿಸಿದ್ದಾರೆ. ಇವರಿಗೆ 40 ವರ್ಷ ವಯಸ್ಸಾಗಿತ್ತು.
ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮುಂಜಾನೆ ನಾಲ್ಕು ಗಂಟೆಯ ಸುಮಾರಿಗೆ ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿದ್ದ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ನಡುವೆ ಅಪಘಾತವಾಗಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸತೀಶ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸತೀಶ್ ಆಚಾರ್ಯರು ಯಕ್ಷಗಾನದಲ್ಲಿ ಕಲಾವಿದನಾಗಿಯೂ ಗುರುತಿಸಿಕೊಂಡು ಅಪಾರ ಜನಮೆಚ್ಚುಗೆ ಪಡೆದುಕೊಂಡಿದ್ದರು. ಈ ಹಿಂದೆ ಕಟೀಲು ಮೇಳದಲ್ಲಿಯೂ ತನ್ನ ಪ್ರತಿಭೆಯನ್ನು ಅನಾವರಣ ಮಾಡಿದ್ದ ಇವರು ಮಂಗಳಾದೇವಿ ಯಕ್ಷಗಾನ ಮೇಳದಲ್ಲಿ ಭಾಗವತಾರಾಗಿ ಸೇವೆ ಸಲ್ಲಿಸುತ್ತಿದ್ದರು.
Subscribe to Updates
Get the latest creative news from FooBar about art, design and business.
Previous Articleಉಪ್ಪಿನಂಗಡಿಯಲ್ಲಿ ‘ಗಯಾಪದ ರಂಗ ಸಂಭ್ರಮ’