ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಉಡುಪಿ ನೇತೃತ್ವದಲ್ಲಿ ಯಕ್ಷಗಾನ ವೇಷಭೂಷಣ ಮತ್ತು ಬಣ್ಣಗಾರಿಕೆ ತರಬೇತಿ ಶಿಬಿರವು ದಿನಾಂಕ 06-05-2024 ರಿಂದ 13-05-2024 ರ ವರೆಗೆ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಯಕ್ಷಗಾನ ಕೇಂದ್ರದ ಸಲಹಾಸಮಿತಿ ಸದಸ್ಯರಾದ ಶ್ರೀ ವಿಶ್ವನಾಥ ಶೆಣೈಯವರು ನೆರವೇರಿಸಿದರು.
ಯಕ್ಷಗಾನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಿಬಿರಾರ್ಥಿಗಳಿಗೆ ಶುಭಕೋರಿದರು. ವೇದಿಕೆಯಲ್ಲಿ ಸಲಹಾ ಸಮಿತಿ ಸದಸ್ಯರಾದ ಶ್ರೀ ಭುವನ ಪ್ರಸಾದ್ ಹೆಗ್ಡೆ, ಶ್ರೀಮತಿ ಪೂರ್ಣಿಮಾ ಸುರೇಶ್ ಉಪಸ್ಥಿತರಿದ್ದರು.
ಗುರು ಉಮೇಶ್ ಸುವರ್ಣರ ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ವಂದಿಸಿದರು. ಶಿಬಿರದಲ್ಲಿ 25 ಮಂದಿ ಯಕ್ಷಗಾನ ಆಸಕ್ತರು ಭಾಗವಹಿಸುತ್ತಿದ್ದಾರೆ.