Subscribe to Updates

    Get the latest creative news from FooBar about art, design and business.

    What's Hot

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ‘ನೃತ್ಯ ಸಿಂಚನ’ | ಫೆಬ್ರವರಿ 21

    February 19, 2026

    ಮೈಸೂರಿನಲ್ಲಿ ‘ಹುತ್ತದಲ್ಲಿ ಹುತ್ತ’ ಅಪೂರ್ವ ಹಾಸ್ಯ ನಾಟಕ ಪ್ರದರ್ಶನ | ಫೆಬ್ರವರಿ 22

    February 19, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ 
    Yakshagana

    ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ 

    July 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮವು ದಿನಾಂಕ 10 -07-2024 ರಂದು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ನಡೆಯಿತು. 

    ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ ಕಲಾವಿದ ಹಾಗೂ ಲೇಖಕರಾದ ನಾ. ಕಾರಂತ ಪೆರಾಜೆ ಮಾತನಾಡಿ “ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ಎಲ್ಲೂ  ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಮಾಡಬೇಕಾದ ಕಾಯಕವಾಗಿದೆ. ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕ ಕಳೆದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
    ಯಕ್ಷಗಾನ ಹಿಮ್ಮೇಳದ ಕಲಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ ಹಾಗೂ ವೇಷಧಾರಿಯಾದ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ದೀಪಪ್ರಜ್ವಲಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಮಗ ಚಿರಂಜೀವಿ ಕೃಷ್ಣಯ್ಯ ಆಚಾ‌ರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್ ಹಾಗೂ ಗಣಪತಿ ನಾಯಕ್ ಅತಿಥಿಗಳನ್ನು ಗೌರವಿಸಿದರು.
    ಪೂರ್ವಾಹ್ನ ದೇವತಾರಾಧನೆಯ ಜೊತೆಗೆ ಬಾಲ ಕಲಾವಿದರಿಂದ ಸಂಗೀತ ಹಾಗೂ ಸ್ಮೃತಿ, ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ’ ಹಾಗೂ ‘ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ನಡೆದವು. ಕಲಾವಿದರಾಗಿ ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು, ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ. ಜಿ. ಜಗನ್ನಿವಾಸ ರಾವ್. ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ, ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು ಇವರುಗಳೆಲ್ಲ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ‘ತುಳು ಭಾಷೆ – ಸಂಸ್ಕೃತಿ ಕಾರ್ಯಾಗಾರ’ | ಜುಲೈ 13
    Next Article ತಾಳಮದ್ದಳೆ ಸಪ್ತಾಹದ ಸಮಾರೋಪ ಸಮಾರಂಭ 
    roovari

    Add Comment Cancel Reply


    Related Posts

    ‘ಸೇವಾ ಭೂಷಣ ಪ್ರಶಸ್ತಿ’ಗೆ ಹಿರಿಯ ಲೇಖಕ ಯು. ಶ್ರೀಧರ್ ಆಯ್ಕೆ

    February 19, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.