Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರಿಂದ ಅಮೇರಿಕಾದಲ್ಲಿ ಯಕ್ಷಗಾನ ಅಭಿಯಾನ | ಜುಲೈ 9ರಿಂದ
    Yakshagana

    ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾವಿದರಿಂದ ಅಮೇರಿಕಾದಲ್ಲಿ ಯಕ್ಷಗಾನ ಅಭಿಯಾನ | ಜುಲೈ 9ರಿಂದ

    July 2, 2024Updated:July 3, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ 9 ಮಂದಿ ಕಲಾವಿದರ ತಂಡ ದಿನಾಂಕ 09-07-2024ರಿಂದ ಅಮೇರಿಕಾದಲ್ಲಿ 75 ದಿನಗಳ ಕಲಾ ಯಕ್ಷಗಾನ ಅಭಿಯಾನ ನಡೆಸಲಿದೆ.

    “ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೇರಿಕಾ ಪ್ರವಾಸ ಕೈಗೊಳ್ಳುತ್ತಿದೆ. ಇದರ ಆಯೋಜನೆಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಯು.ಎಸ್.ಎ. ಮಾಡುತ್ತಿದೆ. ಅಮೇರಿಕಾ ಸರಕಾರದ ಮಾನ್ಯತೆ ಪಡೆದ ಕಾರಣ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಯು.ಎಸ್.ಎ. ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್ ಮುಂತಾದ ಪ್ರಮುಖರು ಅಮೇರಿಕಾದ 20 ರಾಜ್ಯಗಳ ಮುಖ್ಯ ನಗರಗಳಲ್ಲಿ ನಮ್ಮ ಯಕ್ಷಗಾನ ತಂಡದ ಕಾರ್ಯಕ್ರಮಗಳನ್ನು ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    “ತಂಡದಲ್ಲಿ ಹಿಮ್ಮೇಳದ ಕಲಾವಿದರಾಗಿ ಪಟ್ಲ ಸತೀಶ್ ಶೆಟ್ಟಿ, ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ ಹಾಗೂ ಮುಮ್ಮೇಳದಲ್ಲಿ ಪ್ರೊ. ಎಂ.ಎಲ್. ಸಾಮಗ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ, ಪ್ರಶಾಂತ್ ನೆಲ್ಯಾಡಿ, ಮೋಹನ ಬೆಳ್ಳಿಪ್ಪಾಡಿ ಹೀಗೆ ಒಂಬತ್ತು ಮಂದಿಯ ತಂಡ ಸುಮಾರು 75 ದಿವಸಗಳ ಕಲಾ ಪ್ರವಾಸ ಕೈಗೊಳ್ಳಲಿದೆ. ಪುತ್ತಿಗೆ ಮಠಗಳು, ಕನ್ನಡ ಕೂಟದವರು, ಯಕ್ಷಗಾನ ಸಂಘದವರು, ದೇವಸ್ಥಾನಗಳು ಹಾಗೂ ಬೇರೆ ಬೇರೆ ಸಂಘ ಸಂಸ್ಥೆಗಳು ಸಹಕಾರ ನೀಡಲಿವೆ. ಪೌರಾಣಿಕ ಕಥಾನಕಗಳನ್ನು ಆಯ್ದುಕೊಂಡು ಪ್ರದರ್ಶನದ ಕಾರ್ಯಕ್ರಮ ಮಾತ್ರವಲ್ಲದೇ ಕೆಲವು ಕಡೆ ಕಿರು ತರಬೇತಿ ಶಿಬಿರ ಪ್ರಾತ್ಯಕ್ಷಿಕೆಗಳನ್ನು ಕೂಡಾ ನಡೆಸಲಿದ್ದೇವೆ. ಎರಡು ವರ್ಷಗಳಿಗೊಮ್ಮೆ ಅಮೇರಿಕಾದಲ್ಲಿ ನಡೆಯುವ ಬಲು ವಿಜೃಂಭಣೆಯ ಅಕ್ಕ ಸಮ್ಮೇಳನದಲ್ಲಿಯೂ ನಮ್ಮ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ಕಾರ್ಯಕ್ರಮ ನೀಡಲಿದೆ ಎನ್ನುವುದು ಬಹಳ ಹೆಮ್ಮೆಯ ಸಂಗತಿಯಾಗಿದೆ. ಅಮೇರಿಕಾದ ಸ್ಯಾನೋಸೆ, ಸಿಯಾಟಲ್, ಫೀನಿಕ್ಸ್, ಲಾಸ್ ಎಂಜಲೀಸ್, ಆಸ್ಟಿನ್, ಹ್ಯೂಸ್ಟನ್, ಡೆಟ್ರೈಟ್, ಇಜಾಮ್ಸ್ ವಿಲ್ಲೆ, ಮೇರಿಲ್ಯಾಂಡ್, ಟಂಪಾ, ಮಿಲ್ವಾಕಿ, ಶಾರ್ಲೋಟ್, ರಾಲೆ, ಎಡಿಸನ್, ಕೊಲಂಬಸ್, ಬಾಸ್ಟನ್, ಒರ್ಲಾಂಡೊ, ಅಟ್ಲಾಂಟಾ, ಚಿಕಾಗೋ, ಡಲ್ಲಾಸ್, ನ್ಯೂಜೆರ್ಸಿ, ರಿಚ್ಮಂಡ್, ಎಡಿಸನ್ ಮುಂತಾದ ಕಡೆ ಪ್ರದರ್ಶನಗೊಂಡು ನಮ್ಮ ಭಾರತೀಯರನ್ನು ರಂಜಿಸಲಿದ್ದೇವೆ” ಎಂದು ಹೇಳಿದರು.

    ಪ್ರೊ. ಎಂ.ಎಲ್. ಸಾಮಗ ಮಾತನಾಡಿ, “ಕಳೆದ 2023ರ ಜೂನ್ ಮತ್ತು ಜುಲೈ ತಿಂಗಳಲ್ಲಿ ನಮ್ಮ ಯಕ್ಷಧ್ರುವ ಯಕ್ಷ ಶಿಕ್ಷಣದ ಸಂಚಾಲಕರಾದ ವಾಸುದೇವ ಐತಾಳ್ ಪಣಂಬೂರು ಇವರ ನೇತೃತ್ವದಲ್ಲಿ ನಮ್ಮ ತಂಡವು ಯುರೋಪ್ ಖಂಡದ ಲಂಡನ್, ಸ್ಕಾಟ್ಲ್ಯಾಂಡ್, ಜರ್ಮನಿ, ಫ್ರಾನ್ಸ್, ಸ್ವಿಟ್ಜರ್ಲ್ಯಾಂಡ್, ಪ್ಯಾರಿಸ್ ಮುಂತಾದ ಕಡೆ ಕಾರ್ಯಕ್ರಮಗಳನ್ನು ನೀಡಿ ವಿದೇಶೀಯರಿಗೂ, ಭಾರತೀಯರಿಗೂ, ಕೆಲವು ಯೂನಿವರ್ಸಿಟಿಯ ವಿದ್ಯಾರ್ಥಿಗಳಿಗೂ ಯಕ್ಷಗಾನದ ಕಲೆಯನ್ನು ಪರಿಚಯಿಸುವಲ್ಲಿ ಸಫಲವಾಗಿದೆ. ಅಲ್ಲಿನ ಲೀಡ್ಸ್ ಹಾಗೂ ಡರ್ ಹಮ್ ಯುನಿವರ್ಸಿಟಿಗಳಲ್ಲಿ ಯಕ್ಷಗಾನ ತರಬೇತಿ ಶಿಬಿರ ಮತ್ತು ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ, ಯೋಗ ಮತ್ತೆ ಕ್ರೀಡೆಗಳಲ್ಲೂ ಕಲೆ ಯಾವ ರೀತಿ ನಂಟು ಹೊಂದಿದೆ ಎಂಬುದನ್ನು ತೋರ್ಪಡಿಸಿ ಅಲ್ಲಿಯ ಯುನಿವರ್ಸಿಟಿಗಳ ವಿದ್ಯಾರ್ಥಿಗಳಿಗೆ ಯಕ್ಷಗಾನದ ತರಬೇತಿ ನೀಡಿ ಬೇರೆ ಬೇರೆ ದೇಶದಿಂದ ಬಂದಂತಹ ಆ ವಿದ್ಯಾರ್ಥಿಗಳಿಂದಲೂ ನಮ್ಮ ಕಲೆಯ ಪ್ರದರ್ಶನವನ್ನು ಏರ್ಪಡಿಸಿತ್ತು” ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಪ್ರೊ. ಎಂ.ಎಲ್. ಸಾಮಗ, ಪದ್ಮನಾಭ ಉಪಾಧ್ಯ, ಚೈತನ್ಯ ಕೃಷ್ಣ ಪದ್ಯಾಣ, ಹರಿನಾರಾಯಣ ಭಟ್ ಎಡನೀರು, ಚಂದ್ರಶೇಖರ ಧರ್ಮಸ್ಥಳ, ಮಹೇಶ ಮಣಿಯಾಣಿ, ಪ್ರಶಾಂತ್ ನೆಲ್ಯಾಡಿ, ಮೋಹನ ಬೆಳ್ಳಿಪಾಡಿ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleನೃತ್ಯಾಂತರಂಗ ಸರಣಿಗಳಲ್ಲಿ ರಂಜಿಸಿದ 2ನೇ ದಿನದ ‘ವರ್ಣಿಕ’
    Next Article ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ
    roovari

    Add Comment Cancel Reply


    Related Posts

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ

    February 18, 2026

    ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ‘ಯಕ್ಷ ಗಾನಾರ್ಚನೆ’

    February 17, 2026

    ಡಾ. ನಿತ್ಯಾನಂದ ಬಿ. ಶೆಟ್ಟಿ ಇವರ ‘ಅಳವು ಅರಿಯದ ಭಾಷೆ’ ಪುಸ್ತಕ ಲೋಕಾರ್ಪಣೆ

    February 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.