ಕೋಟ : ಬೆಂಗಳೂರಿನ ಪ್ರಸಿದ್ದ ಯಕ್ಷಗಾನ ತಂಡವಾದ ಯಕ್ಷದೇಗುಲ ತಂಡದವರಿಂದ ಉಡುಪಿ ಕೋಟದ ಹಂದೆ ಶ್ರೀ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದಿನಾಂಕ 09-05-2024ರಂದು ಸಂಜೆ 7-30ಕ್ಕೆ ದೇವಸ್ಥಾನದ ನಾಗಪ್ಪಯ್ಯ ಹಂದೆ ರಂಗಮಂಟಪದಲ್ಲಿ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಮಧುಕುಮಾರ್ ಬೋಳಾರ್ ವಿರಚಿತ ‘ಸುದರ್ಶನ ಗರ್ವಭಂಗ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಕಲಾವಿದರಾಗಿ ಹಿಮ್ಮೇಳದಲ್ಲಿ ಲಂಬೋದರ ಹೆಗಡೆ ನಿಟ್ಟೂರು, ರಾಘವೇಂದ್ರ ಹೆಗಡೆ ಯಲ್ಲಾಪುರ, ಶಿವಾನಂದ ಕೋಟ ಭಾಗವಹಿಸುತ್ತಾರೆ. ಮುಮ್ಮೇಳದಲ್ಲಿ ಸುಜಯೀಂದ್ರ ಹಂದೆ, ಕಡಬಾಳ ಉದಯ ಹೆಗಡೆ, ತಮ್ಮಣ್ಣ ಗಾಂವ್ಕರ್, ಆದಿತ್ಯ ಭಟ್, ಕ್ಯಾದಿಗೆ ಮಹಾಬಲೇಶ್ವರ ಭಟ್, ಸ್ಪೂರ್ತಿ ಭಟ್, ರಾಜು ಪೂಜಾರಿ, ನಾಗರಾಜ್ ಪೂಜಾರಿ ಇನ್ನಿತರರೂ ಭಾಗವಹಿಸಲಿದ್ದಾರೆ.