Subscribe to Updates

    Get the latest creative news from FooBar about art, design and business.

    What's Hot

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಡುಪಿಯ ಐ.ವೈ.ಸಿ. ಸಭಾಭವನದಲ್ಲಿ ಉದ್ಘಾಟನೆಗೊಂಡ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’
    Camp

    ಉಡುಪಿಯ ಐ.ವೈ.ಸಿ. ಸಭಾಭವನದಲ್ಲಿ ಉದ್ಘಾಟನೆಗೊಂಡ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’

    June 3, 2026Updated:June 4, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ವೃತ್ತಿ ಮೇಳದ ಯುವ ಕಲಾವಿದರಿಗೆ ಆಯೋಜಿಸಿದ ನಾಲ್ಕು ದಿನಗಳ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ದ ಉದ್ಘಾಟನಾ ಸಮಾರಂಭವು ದಿನಾಂಕ 02 ಜೂನ್ 2026ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಭವನದಲ್ಲಿ ಜರುಗಿತು.

    ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಹಿರಿಯ ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರು ಮಾತನಾಡಿ “ಯಕ್ಷಗಾನದಂತಹ ಶೈಲೀಕೃತ ಕಲೆ ಪರಂಪರೆಯೊಂದಿಗೆ ಔಚಿತ್ಯವರಿತು ಹೊಸತನ್ನು ಸೇರಿಸಿಕೊಳ್ಳತ್ತಾ ಬೆಳೆಯಬೇಕಾಗಿದೆ. ಪ್ರಜ್ಞಾವಂತ ಕಲಾವಿದ ಇದನ್ನು ಮಾಡಲು ಸಾಧ್ಯ. ಇದಕ್ಕೆ ಇಂತಹ ಶಿಬಿರಗಳು ಪೂರಕವಾಗುತ್ತವೆ. ಯಕ್ಷಗಾನ ಕಲಾರಂಗ ಕಲಾವಿದರ ಕ್ಷೇಮ ಚಿಂತನೆಯೊಂದಿಗೆ ಕಲೆಯನ್ನು ಬೆಳೆಸುವ ಕೆಲಸ ಮಾಡುತ್ತಿರುವುದು ಅಭಿನಂದನಾರ್ಹ” ಎಂದು ಹೇಳಿದರು.

    ಅಭ್ಯಾಗತರಾಗಿ ಭಾಗವಹಿಸಿದ್ದ ಬಹುಶ್ರುತ ವಿದ್ವಾಂಸ ದಿವಾಕರ ಹೆಗಡೆ ಕೆರೆಹೊಂಡ ಇವರು ಮಾತನಾಡಿ “ಯಕ್ಷಗಾನದಲ್ಲಿ ಹಲವು ಸಾಧ್ಯತೆಗಳಿವೆ, ಅಧ್ಯಯನಶೀಲ ಕಲಾವಿದರು ತಮ್ಮ ಪ್ರತಿಭೆಯಿಂದ ಹೊಸ ಆಯಾಮ ನಿರ್ಮಿಸಲು ಸಾಧ್ಯವಿದೆ. ಆಹಾರ್ಯ, ಆಂಗಿಕ, ವಾಚಿಕ, ಸಾತ್ವಿಕ ಈ ನಾಲ್ಕೂ ಅಂಶಗಳನ್ನು ಔಚಿತ್ಯವರಿತು ಅಭಿವ್ಯಕ್ತಿಸಿದಾಗ ಯಕ್ಷಗಾನದ ಸೌಂದರ್ಯ ಹೆಚ್ಚುತ್ತದೆ” ಎಂದರು.

    ವೇದಿಕೆಯಲ್ಲಿ ಹಿರಿಯ ಕಲಾವಿದರಾದ ಕೊಂಡದಕುಳಿ ರಾಮಚಂದ್ರ ಹೆಗಡೆ, ಎ.ಪಿ. ಪಾಠಕ್, ಸಂಸ್ಥೆಯ ಸದಸ್ಯರಾದ ಪ್ರೊ. ಕೆ. ಸದಾಶಿವ ರಾವ್, ಪ್ರೊ. ಎಂ.ಎಲ್. ಸಾಮಗ ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷರೂ, ಶಿಬಿರದ ಪ್ರಾಯೋಜಕರೂ ಆದ ಎಂ. ಗಂಗಾಧರ ರಾವ್ ಶಿಬಿರ ಆಯೋಜಿಸಿದ ಉದ್ದೇಶವನ್ನು ತಿಳಿಸಿ ಎಲ್ಲರನ್ನು ಸ್ವಾಗತಿಸಿದರು. ಶಿಬಿರದ ನಿರ್ದೇಶಕ ಪವನ್ ಕಿರಣ್ಕೆರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ಸಂಯೋಜಿಸಿ, ಜತೆ ಕಾರ್ಯದರ್ಶಿ ವಿದ್ಯಾಪ್ರಸಾದ್ ವಂದಿಸಿ, ನಾರಾಯಣ ಎಂ. ಹೆಗಡೆ ಕಾರ್ಯಕ್ರಮ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎಂ. ಪ್ರಭಾಕರ ಜೋಶಿ, ದಿವಾಕರ ಹೆಗಡೆ ಧಾರವಾಡ, ಡಾ. ಜೆ.ಎನ್. ಭಟ್, ಎಚ್. ಸುಜಯೀಂದ್ರ ಹಂದೆ ಹಾಗೂ ಡಾ. ರಾಘವೇಂದ್ರ ರಾವ್ ಭಾಗವಹಿಸಿ ಶಿಬಿರಾರ್ಥಿಗಳಿಗೆ ಅಮೂಲ್ಯ ಮಾಹಿತಿಗಳನ್ನು ನೀಡಿದರು.

     

    baikady camp dance Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ‘ಅರ್ಥಾಂಕುರ’ ಸರಣಿ ತಾಳಮದ್ದಳೆ ಉದ್ಘಾಟನೆ
    Next Article ಪುಸ್ತಕ ವಿಮರ್ಶೆ | ನಾಳೆಯ ಬದುಕಿಗೆ ಹೊಸ ಹುರುಪು ತರುವ ‘ನನ್ನ solo ಟ್ರಿಪ್’
    roovari

    Add Comment Cancel Reply


    Related Posts

    ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14

    June 12, 2026

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026

    ನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ

    June 12, 2026

    ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್ ಪ್ರಶಸ್ತಿಗೆ ಲೇಖಕಿಯ ಆಯ್ಕೆ

    June 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.