ಉಡುಪಿ : ಯಕ್ಷಗಾನ ಕಲಾರಂಗ (ರಿ.) ಉಡುಪಿ ಇದರ ವತಿಯಿಂದ ವೃತ್ತಿ ಮೇಳದ ಯುವ ಕಲಾವಿದರಿಗಾಗಿ ಆಯೋಜಿಸಿರುವ ನಾಲ್ಕು ದಿನಗಳ ಸನಿವಾಸ ‘ಯಕ್ಷಗಾನ ಮಾರ್ಗದರ್ಶಿ ಶಿಬಿರ’ದ ಉದ್ಘಾಟನಾ ಸಮಾರಂಭವು ದಿನಾಂಕ 02 ಜೂನ್ 2026ರಂದು ಪೂರ್ವಾಹ್ನ 10-30 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಇವರು ವಹಿಸಲಿದ್ದು, ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಇವರು ಉದ್ಘಾಟನೆ ಮಾಡಲಿದ್ದಾರೆ. ಯಕ್ಷಗಾನ ವಿದ್ವಾಂಸ ದಿವಾಕರ ಹೆಗಡೆ ಇವರು ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.

