ಉಡುಪಿ : ಯಕ್ಷಗಾನ ಕೇಂದ್ರ, ಶಿವಪ್ರಭಾ ಇಂದ್ರಾಳಿ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ‘ಯಕ್ಷಗಾನ ಕಾರ್ಯಕ್ರಮ’ವನ್ನು ದಿನಾಂಕ 28 ಜೂನ್ 2026ರಂದು ಸಂಜೆ 4-00 ಗಂಟೆಗೆ ಇಂದ್ರಾಳಿ ಯಕ್ಷಗಾನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ‘ಸುಧನ್ವ ಕಾಳಗ’ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.


