Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರಂತರ ಜನ್ಮದಿನಾಚರಣೆ ಸಮಾರಂಭದಲ್ಲಿ ಯಕ್ಷಗಾನ ಕಾರ್ಯಕ್ರಮ | ಅಕ್ಟೋಬರ್ 10
    Literature

    ಕಾರಂತರ ಜನ್ಮದಿನಾಚರಣೆ ಸಮಾರಂಭದಲ್ಲಿ ಯಕ್ಷಗಾನ ಕಾರ್ಯಕ್ರಮ | ಅಕ್ಟೋಬರ್ 10

    October 8, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಯಕ್ಷಗಾನ ಕೇಂದ್ರ ಇಂದ್ರಾಳಿ ಮತ್ತು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದರ ಸಹಯೋಗದಲ್ಲಿ ಡಾ. ಕೋಟ ಶಿವರಾಮ ಕಾರಂತರ 122ನೇ ಜನ್ಮದಿನಾಚರಣೆ ಸಮಾರಂಭವು ದಿನಾಂಕ 10 ಅಕ್ಟೋಬರ್ 2024ರ ಗುರುವಾರದಂದು ಮಧ್ಯಾಹ್ನ 3-00 ಗಂಟೆಗೆ ಕುಂಜಿಬೆಟ್ಟಿನ ಐ.ವೈ.ಸಿ, ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನಡೆಯಲಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಹೆಯ ಸಹಕುಲಾಧಿಪತಿಗಳಾದ ಡಾ. ಎಚ್.ಎಸ್. ಬಲ್ಲಾಳ್ ಇವರು ವಹಿಸಲಿದ್ದು, ಮಾಹೆಯ ಕುಲಪತಿಗಳಾದ ಡಾ. ಲೆ.ಜ.ಡಾ.ಎಂ.ಡಿ. ವೆಂಕಟೇಶ್, ಡಾ. ನಾರಾಯಣ ಸಭಾಹಿತ್, ವನ್ಯಜೀವಿ ತಜ್ಞರಾದ ಡಾ. ಕೆ. ಉಲ್ಲಾಸ್ ಕಾರಂತ ಇವರುಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾದ ಶ್ರೀ ಎ.ಎಸ್.ಎನ್. ಹೆಬ್ಬಾರ್ ಇವರು ಕಾರಂತ ಸಂಸ್ಮರಣೆಯನ್ನು ನಡೆಸಿಕೊಡಲಿದ್ದಾರೆ.

    ಸಭಾ ಕಾರ್ಯಕ್ರಮದ ನಂತರ ಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ‘ಅಂಬಾಶಪಥ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರು – ಶ್ರೀ ಚಂದ್ರಕಾಂತ್ ರಾವ್ ಮೂಡುಬೆಳ್ಳೆ ಮತ್ತು ಶ್ರೀ ಸೃಜನ್ ಗಣೇಶ್ ಹೆಗಡೆ, ಮದ್ದಲೆ – ಎನ್.ಜಿ. ಹೆಗಡೆ ಯಲ್ಲಾಪುರ ಹಾಗೂ ಚಂಡೆ – ರಾಕೇಶ ಮಲ್ಯ, ಹಳ್ಳಾಡಿ ಹಾಗೂ ಮುಮ್ಮೇಳದಲ್ಲಿ : ಭೀಷ್ಮ – ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ, ಅಂಬೆ – ಶಶಿಕಾಂತ ಶೆಟ್ಟಿ ಕಾರ್ಕಳ, ಅಂಬಿಕೆ – ಸುಬ್ರಹ್ಮಣ್ಯ ಮೊಗವೀರ, ಅಂಬಾಲಿಕೆ – ಜಯಂತ ಮಾರ್ಗೋಳಿ, ಸಾಲ್ವ – ವಿಶ್ವನಾಥ ಪೂಜಾರಿ ಹೆನ್ನಾಬೈಲು, ಪರಶುರಾಮ-ಈಶ್ವರ ನಾಯ್ಕ ಮಂಕಿ, ಬ್ರಾಹ್ಮಣ- ಹಳ್ಳಾಡಿ ಜಯರಾಮ ಶೆಟ್ಟಿ ಇವರುಗಳು ಸಹಕರಿಸಲಿದ್ದಾರೆ.

    LEAD Technologies Inc. V1.01

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀಮತಿ ಕೆ.ಎನ್. ವಿಜಯಲಕ್ಷ್ಮಿ ನೆನಪಿನ ಕಾವ್ಯ ಪ್ರಕಾರದ ‘ಅನುವಾದ ಕಮ್ಮಟ’ಕ್ಕೆ ಶಿಬಿರಾರ್ಥಿಗಳಿಗೆ ಆಹ್ವಾನ
    Next Article ಪರಿಚಯ ಲೇಖನ | ‘ಉತ್ಸಾಹೀ ಯಕ್ಷಪ್ರತಿಭೆ’ ಪ್ರೀತಿ ವಿನಾಯಕ ಹೆಗಡೆ ಜಾಲೀಮನೆ
    roovari

    Add Comment Cancel Reply


    Related Posts

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಹಲಸು ಹಣ್ಣುಗಳ ‘ಕವಿಗೋಷ್ಠಿ’ | ಜೂನ್ 06 

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.