ಸುಳ್ಯ : ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಸಭಾ ಭವನದಲ್ಲಿ ಕೀರಿಕ್ಕಾಡು ಮಾಸ್ಟರ್ ವಿಷ್ಣು ಭಟ್ ವಿರಚಿತ ‘ಶಿವ ಪಂಚಾಕ್ಷರಿ ಮಹಿಮೆ’ ಯಕ್ಷಗಾನ ತಾಳಮದ್ದಳೆ ನಡೆಯಿತು. ಸ್ಥಳ ಸಾನ್ನಿಧ್ಯ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆಯೊಂದಿಗೆ ಪ್ರಭಾಕರ ಆಚಾರ್ಯ ಹಿರಿಯಾಣ ಅವರಿಂದ ಸೇವಾ ರೂಪವಾಗಿ ಆಯೋಜಿಸಲ್ಪಟ್ಟ ಈ ಕಲಾ ಕಾರ್ಯಕ್ರಮವು ಡಾ. ರಮಾನಂದ ಬನಾರಿ ಮಂಜೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಹಿರಿಯ ಭಾಗವತ ವಿಶ್ವ ವಿನೋದ ಬನಾರಿ ಅವರ ಸಂಯೋಜನೆಯಲ್ಲಿ ನಡೆದ ತಾಳಮದ್ದಳೆಯಲ್ಲಿ ಭಾಗವತರಾಗಿ ಮೋಹನ ಮೆಣಸಿನಕಾನ, ವಿಕೇಶ್ ರೈ ಶೇಣಿ, ಸಂಜೀವ ರಾವ್ ಮಯ್ಯಾಳ ಭಾಗವಹಿಸಿದ್ದು, ವಿಷ್ಣು ಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣ ಪ್ರಸಾದ್ ಬೆಳ್ಳಿಪ್ಪಾಡಿ ಚೆಂಡೆ ಮದ್ದಳೆಯಲ್ಲಿ ಸಹಕರಿಸಿದರು. ಅರ್ಥಧಾರಿಗಳಾಗಿ ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಐತ್ತಪ್ಪ ಗೌಡ ಮುದಿಯಾರು, ಯಂ. ಬಾಲಕೃಷ್ಣ ಗೌಡ ದೇಲಂಪಾಡಿ, ಎಂ. ರಮಾನಂದ ರೈ ದೇಲಂಪಾಡಿ, ಭಾಸ್ಕರ ಮಾಸ್ತರ್ ದೇಲಂಪಾಡಿ, ರಾಮ ನಾಯ್ಕ ದೇಲಂಪಾಡಿ, ಪದ್ಮನಾಭ ರಾವ್ ಮಯ್ಯಾಳ ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಇವರು ಸಹಕರಿಸಿದರು.