ಬಂಟ್ವಾಳ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ನಡೆಸುವ ಯಕ್ಷಧ್ರುವ ಯಕ್ಷಶಿಕ್ಷಣ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನದ ತರಬೇತಿ ತರಗತಿಯು ಫೌಂಡೇಶನ್‌ನ ಸರಪಾಡಿ ಘಟಕದ ಸಹಕಾರದಲ್ಲಿ ಸರಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ದಿನಾಂಕ 13-07-2024ರಂದು ಉದ್ಘಾಟನೆಗೊಂಡಿತು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ಸಂಚಾಲಕರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಗಂಡು ಕಲೆಯೆಂದು ಬಿಂಬಿತವಾದ ಯಕ್ಷಗಾನದ ಕಲಿಕೆ ಎನ್ನುವುದು ಸ್ವ-ಪ್ರಯತ್ನದಿಂದ, ಪರಿಶ್ರಮದಿಂದ ಬರುತ್ತದೆ. ವಿದ್ಯಾರ್ಥಿಗಳು ಈ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು” ಎಂದು ಹೇಳಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಇವರು ಅಧ್ಯಕ್ಷತೆ ವಹಿಸಿದ್ದರು. ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಕಾರ್ಯದರ್ಶಿ ಧನಂಜಯ ಶೆಟ್ಟಿ ಸರಪಾಡಿ, ಶಾಲಾ ಮುಖ್ಯ ಶಿಕ್ಷಕ ಆದಂ, ಪ್ರಮುಖರಾದ ಕುಸುಮಾಕರ ಶೆಟ್ಟಿ, ಯಾಕೂಬ್, ಜಗದೀಶ್, ಇಸ್ಮಾಯಿಲ್, ಸುನೀತಾ, ಯಕ್ಷಗಾನ ತರಗತಿಯ ನೋಡಲ್ ಶಿಕ್ಷಕ ಅಖಿಲ್ ಶೆಟ್ಟಿ, ಶಿಕ್ಷಕಿಯರಾದ ಅಕ್ಷತಾ, ಪವಿತ್ರಾ ಮತ್ತಿತರರು ಉಪಸ್ಥಿತರಿದ್ದರು. ಯಕ್ಷಶಿಕ್ಷಣದ ಯಕ್ಷಗುರು ನರಸಿಂಹ ಮಯ್ಯ ಅಲೆತ್ತೂರು ಇವರು ನಾಟ್ಯ ತರಬೇತಿಗೆ ಚಾಲನೆ ನೀಡಿದರು. ಕಿಶೋರಿ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ವನಿತಾ ಸ್ವಾಗತಿಸಿ, ವಂದಿಸಿದರು.