Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ಯಕ್ಷಮಾರ್ಗ-1’ – ಯಕ್ಷಗಾನ ನೃತ್ಯ ಪ್ರಾತ್ಯಕ್ಷಿಕೆ
    Yakshagana

    ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಿಂದ ‘ಯಕ್ಷಮಾರ್ಗ-1’ – ಯಕ್ಷಗಾನ ನೃತ್ಯ ಪ್ರಾತ್ಯಕ್ಷಿಕೆ

    October 3, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಯಕ್ಷಗಾನ ಕಲಾವಿದರಿಗೆ ಸಮಗ್ರ ಮಾಹಿತಿ ಇರುವ ತೆಂಕುತಿಟ್ಟು ಯಕ್ಷಮಾರ್ಗ ಸರಣಿಯ ಮೊದಲ ಪ್ರಾತ್ಯಕ್ಷಿಕೆಯನ್ನು ಹಿರಿಯ ಯಕ್ಷಗಾನ ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ದಿನಾಂಕ 28-09-2023ರಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಸಿಕೊಟ್ಟರು.

    ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ (ರಿ) ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಕ್ಷಗಾನ ಕಲಾಪೋಷಕ ಶ್ರೀಕರ ಭಟ್ ಮುಂಡಾಜೆ, “ಈಗಿನ ಯಕ್ಷಗಾನ ಹಾದಿ ತಪ್ಪುತ್ತಿದೆ. ಯಕ್ಷಗಾನ ಪ್ರದರ್ಶನಕ್ಕೂ ನಿಯಂತ್ರಕ ಶಕ್ತಿ ಬೇಕು. ಭಾಗವತರು ನಿರ್ದೇಶಕರು, ಆದರೆ ಅವರಿಗೆ ಹೇಳಲು ದಾಕ್ಷಿಣ್ಯ. ಈ ಕಾರಣದಿಂದಾಗಿ ಯಕ್ಷಗಾನದ ಸತ್ವ ಕ್ಷೀಣಿಸುತ್ತಿದೆ. ಜೊತೆಗೆ, ಯಕ್ಷಗಾನ ಆಡಿಸುವವರು ಕೂಡ ‘ಬಹುಜನರ ಅಪೇಕ್ಷೆ ಮೇರೆಗೆ’ ಎಂದು ಪ್ರೇಕ್ಷಕರ ಮೇಲೆಯೇ ಎಲ್ಲವನ್ನೂ ಹಾಕಿ ನುಣುಚಿಕೊಳ್ಳುತ್ತಾರೆ” ಎಂದು ವಿಷಾದಿಸಿದರು. ‘ಅಕಾಡೆಮಿಯೊಂದು ಮಾಡಬೇಕಿರುವ ಕಾರ್ಯಕ್ರಮವನ್ನು ಸಿರಿಬಾಗಿಲು ರಾಮಕೃಷ್ಣ ಮಯ್ಯರು ಮಾಡುತ್ತಿದ್ದಾರೆ. ಈಗ ಸಮಯವಿದ್ದರೂ ವ್ಯವಧಾನವಿಲ್ಲದ ಈ ಕಾಲದಲ್ಲಿ, ಸಿರಿಬಾಗಿಲು ಪ್ರತಿಷ್ಠಾನವು ಮಾಡುತ್ತಿರುವ ದಾಖಲೀಕರಣಗಳು ಕಲಾವಿದರಿಗೆ ಸದಾ ಕಾಲಕ್ಕೂ ಪ್ರಯೋಜನಕರ’ ಎಂದರು.

    ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಭಾಗವತ ದಿನೇಶ್ ಅಮ್ಮಣ್ಣಾಯ ಅವರು ಮಾತನಾಡಿ, “ಯಕ್ಷಗಾನವೊಂದು ಚೌಕಟ್ಟಿನ ಆಧಾರದಲ್ಲಿರುವ ಕಲೆಯಾಗಿದ್ದು, ಆ ಚೌಕಟ್ಟು ಮೀರಿ ಹೋಗಬಾರದು, ಇದು ಗುರು ಪರಂಪರೆಯನ್ನು ಬೆಳೆಸಿದ ಕಲೆ. ಈಗಿನ ಗಾನವೈಭವ ಅಥವಾ ನಾಟ್ಯವೈಭವಗಳು ಒಂದು ಕಮ್ಮಟವಾಗಿ ಬದಲಾಗಬೇಕು. ಅದರಿಂದಲೇ ಹೊಸ ಕಲಾವಿದರು ಯಕ್ಷಗಾನಕ್ಕೆ ಸಂಬಂಧಿಸಿದಂತೆ ಏನನ್ನಾದರೂ ಕಲಿಯುವಂತಿರಬೇಕು. ಯಕ್ಷಗಾನ ಹೇಗಿತ್ತು, ಅದರಲ್ಲಿ ಏನೆಲ್ಲ ಮಾರ್ಪಾಟು ಮಾಡಬಹುದು ಎಂಬುದನ್ನೆಲ್ಲ ಮನದಟ್ಟು ಮಾಡಿಸಿ, ಮುಂದಿನ ಪೀಳಿಗೆಗೆ ದಾಟಿಸುವ ಸಿರಿಬಾಗಿಲು ಪ್ರತಿಷ್ಠಾನದ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

    ಅತಿಥಿಗಳಾಗಿ ಕಲಾಪೋಷಕ, ಅಮೆರಿಕದ ನಿವಾಸಿ ವಾಸುದೇವ ಐತಾಳ್ ಪಣಂಬೂರು, ಕಲಾವಿದ, ದುಬೈ ನಿವಾಸಿ ಶೇಖರ ಡಿ.ಶೆಟ್ಟಿಗಾರ್ ಕಿನ್ನಿಗೋಳಿ ಅವರು ಶುಭ ಹಾರೈಸಿದರು. ಗುರುಗಳಾದ ಕರ್ಗಲ್ಲು ವಿಶ್ವೇಶ್ವರ ಭಟ್ ಅವರನ್ನು ಕಾರ್ಯಕ್ರಮದ ಸಂಯೋಜಕರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅವರು ಪ್ರತಿಷ್ಠಾನದ ಪರವಾಗಿ ಗೌರವಿಸಿದರು. ಕಲಾವಿದ, ನಾಟ್ಯಗುರು ಲಕ್ಷ್ಮಣ ಕುಮಾರ್ ಮರಕಡ ಅವರು ಕಾರ್ಯಕ್ರಮ ನಿರ್ವಹಿಸಿದರು.

    ಸಭಾ ಕಾರ್ಯಕ್ರಮದ ಬಳಿಕ, ಕರ್ಗಲ್ಲು ವಿಶ್ವೇಶ್ವರ ಭಟ್ ಅವರು ಶಾಸ್ತ್ರೀಯ ಚೌಕಟ್ಟಿನಲ್ಲಿ ಯಕ್ಷಗಾನದ ನಾಟ್ಯ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಪ್ರಾತ್ಯಕ್ಷಿಕೆಯನ್ನು ಹಿರಿಯ ಕಲಾವಿದ ಶಂಭಯ್ಯ ಕಂಜರ್ಪಣೆ ನಿರ್ವಹಿಸಿದರು. ಆರಾಧನಾ ಕಲೆಯಾದ ಯಕ್ಷಗಾನವು ಜನಪದವಾಗಿ, ಜಾನಪದೀಯವಾಗಿ ಮತ್ತು ಶಾಸ್ತ್ರೀಯತೆಯ ಚೌಕಟ್ಟು ಸೃಷ್ಟಿಸಿಕೊಂಡು ವಿಕಾಸಗೊಂಡ ಬಗೆಯನ್ನು ಅವರು ವಿವರಿಸಿದರು. ಯಕ್ಷಗಾನದಲ್ಲಿ ವಂದನೆ, ಆರು ವಿಧದ ಪಾದ-ಘಾತಗಳು, ಗತಿಗಳು, ತಿತ್ತಿತೈ ಹೆಜ್ಜೆಗಳ ವಿವರಣೆ, ನೃತ್ತ, ನೃತ್ಯ, ನಾಟ್ಯದ ವ್ಯತ್ಯಾಸಗಳು, ಏಳು ವಿಧದ ಮೂಲಭೂತ ಹೆಜ್ಜೆಗಳ ವಿವರಣೆ, ಚಲನೆ-ಸ್ಥಿತಿಗಳನ್ನು ಪ್ರಸ್ತುತಪಡಿಸಿದರು. ದೇಸೀ ಕಲೆಯಾದ ಯಕ್ಷಗಾನವನ್ನು ಶಾಸ್ತ್ರೀಯವಾಗಿ ವಿಕಾಸವಾಗಿಲು ಅವಕಾಶಗಳ, ಸಾಧ್ಯತೆಗಳ ಅಗಾಧತೆಯನ್ನು ಅವರು ತೆರೆದಿಟ್ಟರು. ಜೊತೆಗೆ, ಪೂರ್ವರಂಗದ ಮಹತ್ವವೇನು ಎಂಬುದನ್ನು ಖಚಿತವಾಗಿ ವಿವರಿಸಿದರು. ಬಳಿಕ ಪ್ರೇಕ್ಷಕರೊಂದಿಗೆ ಸಂವಾದ ಜರುಗಿತು.

    Share. Facebook Twitter Pinterest LinkedIn Tumblr WhatsApp Email
    Previous Articleಕ.ಸಾ.ಪ.ದ ವತಿಯಿಂದ ಸಾಹಿತಿಗಳ ಮನೆ ಭೇಟಿ ಕಾರ್ಯಕ್ರಮ
    Next Article ಉಳ್ಳಾಲದಲ್ಲಿ ಸಾರ್ವಜನಿಕ ರಸಪ್ರಶ್ನೆ ಸ್ಪರ್ಧೆ | ಅಕ್ಟೋಬರ್ 24ರಂದು
    roovari

    Add Comment Cancel Reply


    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.