Subscribe to Updates

    Get the latest creative news from FooBar about art, design and business.

    What's Hot

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ಮಂಗಳೂರಿನ ಪುರಭವನದಲ್ಲಿ ‘ರಿಮ್ಜಿಮ್’ ಸಂಗೀತ ಕಾರ್ಯಕ್ರಮ | ಜುಲೈ 12

    July 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ – ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ಪ್ರದಾನ
    Awards

    ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ – ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ ಪ್ರದಾನ

    November 22, 2023No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಯಕ್ಷ ಭಾರತಿ ಪುತ್ತೂರು ಸಹಯೋಗದೊಂದಿಗೆ ನಡೆಸುವ ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮ, ಹನ್ನೊಂದನೇ ವರ್ಷದ ನುಡಿ ಹಬ್ಬ ‘ಶ್ರೀಹರಿ ಚರಿತ್ರೆ’ ಯಕ್ಷಗಾನ ತಾಳಮದ್ದಳೆ ಸಪ್ತಾಹ – 2023 ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ರವೀಂದ್ರ ಕಲಾಭವನದಲ್ಲಿ ದಿನಾಂಕ 19-11-2023ರಂದು ಉದ್ಘಾಟನೆಗೊಂಡಿತು. 

    ಈ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿದ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇವರು ಮಾತನಾಡುತ್ತಾ “ಯಕ್ಷಗಾನ ಹಲವು ರೋಗಗಳಿಗೆ ಔಷಧ ರೂಪದಲ್ಲಿ ಪರಿಣಾಮ ಬೀರುತ್ತದೆ. ಯಕ್ಷಗಾನ ವೀಕ್ಷಣೆಯಿಂದ ಮಾನಸಿಕ ಒತ್ತಡ ದೂರವಾಗಿ ನೆಮ್ಮದಿ ಪಡೆಯಬಹುದು. ತಾಳಮದ್ದಳೆ ಸಪ್ತಾಹದ ಮೂಲಕ ಯಕ್ಷಾಂಗಣ ಸಂಸ್ಥೆ ಕನ್ನಡವನ್ನು ಉಳಿಸುವ ಕೆಲಸ ಮಾಡುತ್ತಿದೆ” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ “ಇಂದಿನ ಪೀಳಿಗೆ ಮೊಬೈಲ್ ವೀಕ್ಷಣೆಗೆ ಸಮಯ ಮೀಸಲಿಡುತ್ತಿದೆ. ಅದರಿಂದ ದೂರ ಸರಿಯಲು ಯಕ್ಷಗಾನ ಮತ್ತು ತಾಳಮದ್ದಳೆ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸಬೇಕು. ಕಲೆ ಉಳಿಸಲು ಎಲ್ಲರೂ ನೆರವಾಗಬೇಕು” ಎಂದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, “ನಮ್ಮ ಮಣ್ಣಿನ ಕಲೆಯನ್ನು ವಿವಿಧ ಆಯಾಮಗಳಲ್ಲಿ ಮೆರೆಸುವ ಯಕ್ಷಾಂಗಣದಂತಹ ಸಂಸ್ಥೆಗಳಿಗೆ ಮಂಗಳೂರು ಮಹಾನಗರ ಪಾಲಿಕೆಯಿಂದ ಕೈಲಾದ ನೆರವು ನೀಡಲಾಗುವುದು” ಎಂದರು.

    ಯಕ್ಷಾಂಗಣದ ಗೌರವಾಧ್ಯಕ್ಷ ಡಾ. ಎ.ಜೆ. ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದು, ಅಹಮದಾಬಾದ್ ಉದ್ಯಮಿ ಹಾಗೂ ಉಪ್ಪಳ ರಾಜರಾಜೇಶ್ವರಿ ದೇವಳದ ಆಡಳಿತ ಮೊಕ್ತೇಸರ ಕೆ.ಕೆ. ಶೆಟ್ಟಿ ಸಂಸ್ಥೆಯ ಗೌರವ ಉಪಾಧ್ಯಕ್ಷರಾಗಿ ಪದಗ್ರಹಣ ಮಾಡಿದರು.

    ಮಂಗಳೂರು ವಿ.ವಿ. ಡಾ.ದಯಾನಂದ ಪೈ, ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ  ಶುಭಾಶಂಸನೆಗೈದರು.

    ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾ ಪೋಷಕರಿಗಾಗಿ ನೀಡಲಾಗುವ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ವನ್ನು ಉದ್ಯಮಿ – ಸಮಾಜ ಸೇವಕ ಶ್ರೀ ಯಾದವ ಕೋಟ್ಯಾನ್ ಪೆರ್ಮುದೆ ಅವರಿಗೆ ಪ್ರದಾನ ಮಾಡಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ “ಆಧುನಿಕ ಸಮಾಜದಲ್ಲಿ ಅನೇಕ ಸವಾಲುಗಳ ನಡುವೆಯೂ ಯಕ್ಷಗಾನವು ಸಂಪ್ರದಾಯದೊಂದಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿದೆ. ಯಕ್ಷಗಾನ ತುಳುನಾಡಿನ ಹೆಮ್ಮೆಯ ಕಲೆಯಾಗಿ ನೈತಿಕವಾಗಿ, ಶೈಕ್ಷಣಿಕವಾಗಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ” ಎಂದರು.

    ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ಪ್ರಸ್ತಾವನೆಗೈದರೆ, ಉಪಾಧ್ಯಕ್ಷ ರವೀಂದ್ರ ರೈ ಕಲ್ಲಿಮಾರು ಅಭಿನಂದನಾ ಭಾಷಣ ಮಾಡಿ, ಮಹಿಳಾ ಪ್ರತಿನಿಧಿ ನಿವೇದಿತಾ ಎನ್. ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ಕೆ.ಲಕ್ಷ್ಮೀನಾರಾಯಣ ರೈ ವಂದಿಸಿ, ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಮುಖರಾದ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ಕರುಣಾಕರ ಶೆಟ್ಟಿ ಪಣಿಯೂರು, ಸುಧಾಕರ ರಾವ್ ಪೇಜಾವರ, ಸಿದ್ದಾರ್ಥ ಅಜ್ರಿ, ಶರತ್ ಕುಮಾರ್ ಕದ್ರಿ, ಸುಮಾ ಪ್ರಸಾದ್ ಉಪಸ್ಥಿತರಿದ್ದರು. ‘ಶ್ರೀ ಹರಿ ಚರಿತ್ರೆ’ ಏಕಾದಶ ಸರಣಿಯ ಮೊದಲ ತಾಳಮದ್ದಳೆ ‘ಧ್ರುವ ಚರಿತ್ರೆ’ ಭವ್ಯಶ್ರೀ ಕುಲ್ಕುಂದ ಅವರ ಭಾಗವತಿಕೆಯಲ್ಲಿ ಜರಗಿತು. ಪ್ರಸಿದ್ಧ ಅರ್ಥಧಾರಿಗಳು ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleನಾರಿ ಚಿನ್ನಾರಿಯ ಹನ್ನೊಂದನೆಯ ಸರಣಿ ಕಾರ್ಯಕ್ರಮ ‘ರಸ ಪಯಸ್ವಿನಿ’ ಯಶಸ್ವಿಯಾಗಿ ಸಂಪನ್ನ
    Next Article ಬಿ.ಆರ್. ಸಾಯಿನಾಥ್ ಮತ್ತು ತ್ರಿಭಾಷಾ ಸಾಹಿತಿ ಮುಲ್ಲೇಂಗಡ ದಿ.ಬೇಬಿ ಚೋಂದಮ್ಮ ಸ್ಮರಣಾರ್ಥ ‘ದತ್ತಿ ಉಪನ್ಯಾಸ’
    roovari

    Add Comment Cancel Reply


    Related Posts

    ‘ಕೊ. ಅ. ಉಡುಪ ಪ್ರಶಸ್ತಿ’ಗೆ ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

    July 11, 2026

    ಕ.ಸಾ.ಪ.ದ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಲೇಖಕರ ಆಯ್ಕೆ

    July 11, 2026

    ‘ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ’ಗೆ ಕನ್ನಡ ಪುಸ್ತಕಗಳ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 2026

    July 11, 2026

    ಮಹಮ್ಮಾಯಿ ಯಕ್ಷಗಾನ ಮೇಳದ ಕಲಾವಿದರಿಗೆ ‘ಕೆ.ವಿ. ಪೈ ಪ್ರಶಸ್ತಿ’ ಪ್ರದಾನ

    July 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.