Subscribe to Updates

    Get the latest creative news from FooBar about art, design and business.

    What's Hot

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಬೆಂಗಳೂರಿನ ಶ್ರೀ ಸಿ. ಅಶ್ವಥ್ ಕಲಾ ಭವನದಲ್ಲಿ ‘ಕಾವ್ಯ ಕಾಮಧೇನು ಎಚ್.ಎಸ್.ವಿ.’ | ಜೂನ್ 08

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಆರ್ಯಭಟ’ ಪುರಸ್ಕೃತರಿಗೆ ಯಕ್ಷಾಂಗಣದ ಗೌರವ
    Awards

    ‘ಆರ್ಯಭಟ’ ಪುರಸ್ಕೃತರಿಗೆ ಯಕ್ಷಾಂಗಣದ ಗೌರವ

    July 24, 2024No Comments2 Mins Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು 22 ಜುಲೈ 2024ರಂದು ‘ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ’ ಪುರಸ್ಕೃತರಾದ ಸಮಿತಿಯ ಮೂವರು ಸಾಧಕರಿಗೆ ಬಲ್ಮಠ ಕುಡ್ಲ ಪೆವಿಲಿಯನ್ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿತು.

    ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ವಿದ್ವಾಂಸ ಮತ್ತು ಸಂಸ್ಕೃತಿ ಚಿಂತಕ ಡಾ. ಎಂ. ಪ್ರಭಾಕರ ಜೋಶಿ ಇವರು “ಕಲೆ, ಸಂಸ್ಕೃತಿ, ಸಾಹಿತ್ಯ – ಶಿಕ್ಷಣ ಇತ್ಯಾದಿ ಕ್ಷೇತ್ರಗಳ ಬೆಳವಣಿಗೆಗೆ ಸಾಮಾಜಿಕ ಮತ್ತು ಧಾರ್ಮಿಕ ರಂಗದಲ್ಲಿ ದುಡಿಯುವವರ ಕೊಡುಗೆ ಅಪಾರ. ತಮ್ಮ ನೆಲದ ಸಂಸ್ಕೃತಿಯ ಮೇಲಿನ ಪ್ರೀತಿಯೇ ಅಂಥವರ ಸಾಧನೆಗೆ ಸೋಪಾನವಾಗಿದೆ” ಎಂದು ಹೇಳಿದರು.

    ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಮತ್ತು ಹಿರಿಯ ಉದ್ಯಮಿ ಡಾ. ಎ. ಸದಾನಂದ ಶೆಟ್ಟಿ ಇವರು ಜ್ಯೋತಿ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯಿಂದ 2024ನೇ ಸಾಲಿನ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪಡೆದ ಯಕ್ಷಾಂಗಣದ ಗೌರವ ಉಪಾಧ್ಯಕ್ಷ ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರ, ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು, ಉಪಾಧ್ಯಕ್ಷ ಲಯನ್ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ ಇವರುಗಳನ್ನು ಶಾಲು, ಹೂಹಾರ, ಸ್ಮರಣಿಕೆ ಮತ್ತು ಅಭಿನಂದನಾ ಫಲಕಗಳೊಂದಿಗೆ ಗಣ್ಯರು ಸನ್ಮಾನಿಸಿದರು.

    ಹಿರಿಯ ಲೆಕ್ಕ ಪರಿಶೋಧಕ ಎಸ್.ಎಸ್. ನಾಯಕ್ ಮತ್ತು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಕಾರ್ಯಾಧ್ಯಕ್ಷ ದೇವಿ ಚರಣ್ ಶೆಟ್ಟಿ ಅತಿಥಿಗಳಾಗಿದ್ದರು. ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ಸಭೆಯ ಅಧ್ಯಕ್ಷತೆ ವಹಿಸಿದ್ದರು.

    ಯಕ್ಷಾಂಗಣದ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ, ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಪದಾಧಿಕಾರಿಗಳಾದ ರವೀಂದ್ರ ರೈ ಕಲ್ಲಿಮಾರು, ನಿವೇದಿತಾ ಎನ್. ಶೆಟ್ಟಿ ಬೆಳ್ಳಿಪ್ಪಾಡಿ ಮತ್ತು ಸುಮಾ ಪ್ರಸಾದ್ ಸನ್ಮಾನ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸಮಿತಿಯ ಸುಧಾಕರ ರಾವ್ ಪೇಜಾವರ ವಂದಿಸಿದರು. ಪದಾಧಿಕಾರಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ಕೆ. ಲಕ್ಷ್ಮೀನಾರಾಯಣ ರೈ ಹರೇಕಳ, ಕೃಷ್ಣಪ್ಪ ಗೌಡ ಪಡ್ಡಂಬೈಲು, ವಿನುತಾ ಕಾಸರಗೋಡು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Article‘ಉದ್ದ ಲಂಗದ ಕಾಲೇಜು ದಿನಗಳು’ ಪುಸ್ತಕ ಲೋಕಾರ್ಪಣೆ
    Next Article ಕಲಾಗ್ರಾಮದಲ್ಲಿ ‘ಗಾಂಪರ ಗುಂಪು’ ನಾಟಕ ಪ್ರದರ್ಶನ | ಜುಲೈ 27
    roovari

    Add Comment Cancel Reply


    Related Posts

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025

    ಸಮಾರೋಪಗೊಂಡ ಯಕ್ಷಪಕ್ಷ – ರಜತ ಸರಯೂ ಕಾರ್ಯಕ್ರಮ

    June 3, 2025

    ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’ ಕಾರ್ಯಕ್ರಮ | ಜೂನ್ 08

    June 3, 2025

    ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಇವರುಗಳಿಗೆ ಗೌರವ ಸನ್ಮಾನ | ಜೂನ್ 04

    June 3, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.