ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದಿಂದ ನೀಡುವ ‘ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ’ವನ್ನು ಈ ಬಾರಿ ಉಡುಪಿಯ ಹಿರಿಯ ಯಕ್ಷಗಾನ ಕಲಾವಿದರಾದ ದೇವದಾಸ್ ರಾವ್ ಕೂಡ್ಲಿ ಅವರಿಗೆ ನೀಡಲಾಗುವುದು. ದೇವದಾಸ್ ಅವರು ಯಕ್ಷಗಾನ ಕೇಂದ್ರ ಉಡುಪಿಯ ಗುರುಗಳಾಗಿ ಸೇವೆ ಸಲ್ಲಿಸಿದ್ದು, ದೇಶ ವಿದೇಶಗಳಲ್ಲಿ ಹಲವು ಯಕ್ಷಗಾನ ಕಾರ್ಯಕ್ರಮಗಳಲ್ಲಿ ಮದ್ದಲೆ ವಾದಕರಾಗಿ, ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೇ 5ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನಾಚರಣೆಯ ಸಂದರ್ಭದಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಮಿನಿ ಅಡಿಟೋರಿಯಂನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುವುದು.