ಪಣಜಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಗೋವಾ ಕನ್ನಡ ಸಮಾಜ ಪಣಜಿ ಇವರ ಸಂಯುಕ್ತಾಶ್ರಯದಲ್ಲಿ ‘ಯಕ್ಷಶರಧಿ’ ಕಾರ್ಯಕ್ರಮವನ್ನು ದಿನಾಂಕ 09 ಮಾರ್ಚ್ 2025ರಂದು ಬೆಳಿಗ್ಗೆ 10-00 ಗಂಟೆಗೆ ಪಣಜಿಯ ಮೆನೆಝೆಸ್ ಭ್ರಗಾಂಜ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಗೋವಾ ಬಂಟ್ಸ್ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ‘ಯಕ್ಷಸಾಹಿತ್ಯ-ಸಾಂಗತ್ಯ’ ಎಂಬ ವಿಷಯದ ಬಗ್ಗೆ ಬೆಂಗಳೂರಿನ ಪುರೋಹಿತರು ಮತ್ತು ಅರ್ಥದಾರಿಗಳಾದ ಅಜಿತ ಕಾರಂತ ಟಿ.ವಿ. ಇವರಿಂದ ವಿಚಾರ ಸಂಕಿರಣ ನಡೆಯಲಿದೆ. ಹೊನ್ನವಳ್ಳಿಯ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾ ಸಂಘ ಇವರಿಂದ ‘ಶರಸೇತು ಬಂಧನ’ ತಾಳಮದ್ದಲೆ ಹಾಗೂ ಹಳುವಳ್ಳಿ ಕಳಸದ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಮಂಡಳಿ (ರಿ.) ಇವರಿಂದ ‘ಸುಧನ್ವಾರ್ಜುನ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.