ಉಡುಪಿ : ಯಕ್ಷಗಾನ ಕಲಾರಂಗ (ರಿ.) ಇದರ ವತಿಯಿಂದ ಭೀಮ ಗೋಲ್ಡ್ ಪ್ರೈ.ಲಿ. ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ಭೀಮ ‘ಯಕ್ಷಶಿಕ್ಷಣ ಸನಿವಾಸ ಶಿಬಿರ -2025’ವನ್ನು ದಿನಾಂಕ 22 ಮಾರ್ಚ್ 2025ರಿಂದ 28 ಮಾರ್ಚ್ 2025ರವರೆಗೆ ಉಡುಪಿಯ ಕಲಾರಂಗ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ದಿನಾಂಕ 22 ಮಾರ್ಚ್ 2025ರಂದು ಪೂರ್ವಾಹ್ನ 10-30 ಗಂಟೆಗೆ ಮಾನ್ಯ ಶಾಸಕರಾದ ಯಶ್ ಪಾಲ್ ಎ. ಸುವರ್ಣ ಇವರು ಈ ಶಿಬಿರದ ಉದ್ಘಾಟನೆ ಮಾಡಲಿದ್ದು, ಬೆಂಗಳೂರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಗುರು ಬನ್ನಂಜೆ ಸಂಜೀವ ಸುವರ್ಣ ಇವರು ನಿರ್ದೇಶಕರಾಗಿದ್ದು, ಗುರುಗಳಾಗಿ ನರಸಿಂಹ ತುಂಗ ಮತ್ತು ಕುಮಾರಿ ಆದ್ಯತಾ ಭಟ್ ಹಾಗೂ ನಿರಂಜನ ಭಟ್ ಇವರು ಸಂಯೋಜಕರಾಗಿ ಈ ಶಿಬಿರ ನಡೆಸಿಕೊಡಲಿದ್ದಾರೆ. ಸಂಜೆ 6-00 ಗಂಟೆಗೆ ಉಡುಪಿಯ ‘ಯಕ್ಷಸಂಜೀವ ಯಕ್ಷಗಾನ ಕೇಂದ್ರ’ ಇಲ್ಲಿನ ವಿದ್ಯಾರ್ಥಿಗಳಿಂದ ಬನ್ನಂಜೆ ಸಂಜೀವ ಸುವರ್ಣ ಇವರ ನಿರ್ದೇಶನದಲ್ಲಿ ‘ಜಟಾಯು ಮೋಕ್ಷ’ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.