ದರ್ಬೆ : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ‘ಯಕ್ಷ ಶ್ರಾವಣ -6’ ತಾಳಮದ್ದಳೆ ಶ್ರೀ ಸಿದ್ಧಿ ವಿನಾಯಕ ಭಕ್ತ ವೃಂದ ಕುಂಞಿಮಲೆ ದರ್ಬೆ ಇಲ್ಲಿನ 39ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ದಿನಾಂಕ 14 ಸೆಪ್ಟೆಂಬರ್ 2026ರಂದು ‘ಶ್ರೀ ಕೃಷ್ಣ ಸಂಧಾನ (ಧುರವೀಳ್ಯ)’ ಎಂಬ ಆಖ್ಯಾನದೊಂದಿಗೆ ನಡೆಯಿತು.
ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಪಿ.ಟಿ. ಜಯರಾಮ ಭಟ್, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ಶ್ರೀ ಕೃಷ್ಣ), ಗುಡ್ಡಪ್ಪ ಬಲ್ಯ (ಕೌರವ) ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ವಿದುರ) ಸಹಕರಿಸಿದರು. ಕಾರ್ಯಕ್ರಮದ ಸಂಯೋಜಕ ಸತೀಶ್ ಇರ್ದೆ ಸ್ವಾಗತಿಸಿ, ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ವಂದಿಸಿದರು. ಸಿದ್ಧಿವಿನಾಯಕ ಭಕ್ತ ವೃಂದದ ವತಿಯಿಂದ ಕಲಾವಿದರಿಗೆ ಶಾಲು ಹೊದಿಸಿ, ಶ್ರೀ ದೇವರ ಪ್ರಸಾದವನ್ನಿತ್ತು ಗೌರವಿಸಲಾಯಿತು.
