ಉಳ್ಳಾಲ : ಮಂಗಳೂರು ವಿಶ್ವವಿದ್ಯಾಲಯದ ಡಾ. ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇದರ ವತಿಯಿಂದ ಕಲಾವಿದರ ಯಕ್ಷ ಪಯಣದ ಸ್ವಗತ ‘ಯಕ್ಷಾಯಣ’ ದಾಖಲೀಕರಣ ಸರಣಿ ಕಾರ್ಯಕ್ರಮದ ಉದ್ಘಾಟನೆಯು ದಿನಾಂಕ 01-12-2023ರಂದು ಶುಕ್ರವಾರ ಸಂಜೆ ಗಂಟೆ 4ಕ್ಕೆ ಮಂಗಳಗಂಗೋತ್ರಿ ಯಕ್ಷಗಾನ ಕಲಾಕೇಂದ್ರದಲ್ಲಿ ನಡೆಯಲಿದೆ.
ಯಕ್ಷಾಯಣ ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ಣಾಟಕ ಜಾನಪದ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ. ಚಿನ್ನಪ್ಪ ಗೌಡ ಅವರು ಉದ್ಘಾಟಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಜಯರಾಜ್ ಅಮೀನ್ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಿರಿಯ ಪ್ರಾಧ್ಯಾಪಕರಾದ ಡಾ. ಬೋಜ ಪೂಜಾರಿ ಅವರು ಗೌರವ ಉಪಸ್ಥಿತಿಯಲ್ಲಿ ಯಕ್ಷಗಾನ ವಿದ್ವಾಂಸರು ಹಾಗೂ ಅರ್ಥಧಾರಿಗಳಾಗಿರುವ ಡಾ. ಎಂ.ಪ್ರಭಾಕರ ಜೋಶಿ ಅವರು ಕಾರ್ಯಕ್ರಮದಲ್ಲಿ ತಮ್ಮ ಮಂಗಳೂರು ಯಕ್ಷಪಯಣದ ಅನುಭವ ಕಥನವನ್ನು ಹಂಚಿಕೊಳ್ಳಲಿದ್ದಾರೆ.