29.07.2002ರಂದು ಮಂಜುನಾಥ್ ಹಾಗೂ ಪ್ರಮೀಳಾ ಶೆಟ್ಟಿ ಅವರ ಮಗನಾಗಿ ಅಜಿತ್ ಪುತ್ತಿಗೆ ಅವರ ಜನನ. ಪ್ರಸ್ತುತ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಸಬ್ಬಣಕೋಡಿ ರಾಮ ಭಟ್ ಇವರ ಯಕ್ಷಗಾನದ ಗುರುಗಳು. ಅಣ್ಣ ಯಕ್ಷಗಾನ ವೇಷ ಮಾಡುವುದನ್ನು ನೋಡಿ ಯಕ್ಷಗಾನದ ಮೇಲೆ ಆಸಕ್ತಿ ಹುಟ್ಟಿ ಯಕ್ಷಗಾನ ರಂಗಕ್ಕೆ ಬಂದು ಇಂದು ಒಬ್ಬ ಪ್ರಬುದ್ಧ ಕಲಾವಿದನಾಗಿ ಯಕ್ಷಗಾನ ರಂಗದಲ್ಲಿ ರೂಪುಗೊಳ್ಳುತ್ತಿದ್ದಾರೆ.
ರಂಗಕ್ಕೆ ಹೋಗುವ ಮೊದಲು ಪ್ರಸಂಗದ ಬಗ್ಗೆ ಯಾವ ರೀತಿಯ ತಯಾರಿ ಮಾಡಿಕೊಳ್ಳುತ್ತೀರಿ:-
ಹಿರಿಯ ಕಲಾವಿದರ ಜೊತೆಗೆ ಯಕ್ಷಗಾನ ಪ್ರಸಂಗದ ಬಗ್ಗೆ ಕೇಳಿ ಹಾಗೂ ಪ್ರಸಂಗದ ನಡೆ ತಿಳಿಯಲು ಯಕ್ಷಗಾನದ ತುಣುಕುಗಳನ್ನು ಯೂಟ್ಯೂಬ್ ನಲ್ಲಿ ವಿಡಿಯೋ ನೋಡಿ ತಯಾರಿ ಮಾಡಿಕೊಳ್ಳುತ್ತೇನೆ ಎಂದು ಅಜಿತ್ ಅವರು ಹೇಳುತ್ತಾರೆ.
ದೇವಿ ಮಹಾತ್ಮೆ, ಶ್ರೀನಿವಾಸ ಕಲ್ಯಾಣ, ಶುಕ್ರನಂದನೆ, ಕೃಷ ಲೀಲೆ ಇವರ ನೆಚ್ಚಿನ ಪ್ರಸಂಗಗಳು.
ಕೃಷ್ಣ, ಷಣ್ಮುಖ, ಅಭಿಮನ್ಯು ಇವರ ನೆಚ್ಚಿನ ವೇಷಗಳು.
ಯಕ್ಷಗಾನದ ಇಂದಿನ ಸ್ಥಿತಿ ಗತಿ ಹಾಗೂ ಪ್ರೇಕ್ಷಕರ ಬಗ್ಗೆ ಅಭಿಪ್ರಾಯ:-
ಯಕ್ಷಗಾನ ಬಹಳ ಉನ್ನತ ಮಟ್ಟದಲ್ಲಿ ಬೆಳೆಯುತ್ತಾ ಇದೆ, ಕಾಲಕ್ಕೆ ತಕ್ಕಂತೆ ಯಕ್ಷಗಾನದಲ್ಲಿ ಬದಲಾವಣೆಗಳು ಅಗತ್ಯ ಹಾಗೂ ಅನಿವಾರ್ಯ. ಅನೇಕ ಯುವಕರು ಯಕ್ಷಗಾನಕ್ಕೆ ಮಾರುಹೋಗಿ, ಅಭಿಮಾನಿಗಳಾಗುತ್ತಿರುವುದು ಸಂತಸದ ವಿಷಯ. ಕೇವಲ ಮನರಂಜನೆಗೆ ಇಟ್ಟುಕೊಳ್ಳದೇ, ಇಲ್ಲಿ ಸಿಗುವ ಅನೇಕ ವಿಚಾರಾನುಭವಗಳಿಂದ ಸ್ವಾಸ್ಥ್ಯ ಪ್ರಪಂಚದಲ್ಲಿ ಶಿಷ್ಟ ಕಲೆಯ ಮಹತ್ವ ಹೆಚ್ಚುವಂತೆ ಮಾಡಿದರೆ ಒಳ್ಳೆಯದು.
ಯಕ್ಷರಂಗದಲ್ಲಿ ನಿಮ್ಮ ಮುಂದಿನ ಯೋಜನೆ:-
ಯಕ್ಷಗಾನ ಚೌಕಟ್ಟನ್ನು ಮೀರದೆ ಯಕ್ಷಗಾನದಲ್ಲಿ ಒಬ್ಬ ಒಳ್ಳೆಯ ಕಲಾವಿದನಾಗಿ ಬೆಳೆಯಬೇಕು.
ಪುಸ್ತಕ ಓದುವುದು ಇವರ ಹವ್ಯಾಸ.
ಎಡನೀರು, ಹೊಸನಗರ ಮೇಳದಲ್ಲಿ ತಿರುಗಾಟ ಮಾಡಿ ಪ್ರಸ್ತುತ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿದ್ದಾರೆ.
ಇವರಿಗೆ ಇವರು ನಂಬಿರುವ ಕಲಾಮಾತೆ ಹಾಗೂ ಕಟೀಲು ಶ್ರೀ ಭ್ರಮರಾಂಬೆ ಕಲೆಯಲ್ಲಿ ಇನ್ನಷ್ಟು ಸಾಧಿಸುವ ಶಕ್ತಿಯನ್ನು ಕರುಣಿಸಲಿ, ಅವರಿಗೆ ಶುಭವನ್ನು ಕರುಣಿಸಲಿ ಎಂದು ಬೇಡುತ್ತಿದ್ದೇವೆ ಹಾಗೂ ಕಲಾಮಾತೆಯು ಸಕಲ ಭಾಗ್ಯಗಳನ್ನೂ ಅನುಗ್ರಹಿಸಲಿ ಎಂದು ಕಲಾಭಿಮಾನಿಗಳೆಲ್ಲರ ಪರವಾಗಿ ಹಾರೈಕೆಗಳು.
Photo Click:- Subrahmanya Vattelsu , Dhanu K.P, Praveen Rai.
- ಶ್ರವಣ್ ಕಾರಂತ್ ಕೆ., ಶಕ್ತಿನಗರ, ಮಂಗಳೂರು