ಬೆಳ್ತಂಗಡಿ : ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ಆಶ್ರಯದಲ್ಲಿ ‘ಯುವಸಾಹಿತ್ಯ ಚುಟುಕು ಕವಿಗೋಷ್ಠಿ’ ಕಾರ್ಯಕ್ರಮವನ್ನು ದಿನಾಂಕ 22 ಮಾರ್ಚ್ 2026ರಂದು ಬೆಳಿಗ್ಗೆ 10-00 ಗಂಟೆಗೆ ಬೆಳ್ತಂಗಡಿ ಜೆ.ಸಿ.ಐ. ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಾನಪದ ಪರಿಷತ್ ಮೂಡಬಿದರೆ ತಾಲೂಕು ಅಧ್ಯಕ್ಷೆ ಶ್ರೀಮತಿ ಪದ್ಮಶ್ರೀ ಭಟ್ ನಿಡ್ಡೊಡಿ ಇವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಚುಟುಕು ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಇದರ ಅಧ್ಯಕ್ಷರಾದ ಶಿವಪ್ರಸಾದ್ ಕೊಕ್ಕಡ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ದ್ವಿಭಾಷಾ ಸಾಹಿತಿಗಳಾದ ಆರ್ಯನ್ ಸವನಾಲ್ ಇವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

