Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಾತಾ ಅಮೃತಾನಂದಮಯಿ ಮಠದ 25ನೇ ವರ್ಷದ ಸಂಭ್ರಮಾಚರಣೆಯಲ್ಲಿ ‘ಯುವ ಸಾಹಿತ್ಯ ಸಮ್ಮೇಳನ’
    Kannada

    ಮಾತಾ ಅಮೃತಾನಂದಮಯಿ ಮಠದ 25ನೇ ವರ್ಷದ ಸಂಭ್ರಮಾಚರಣೆಯಲ್ಲಿ ‘ಯುವ ಸಾಹಿತ್ಯ ಸಮ್ಮೇಳನ’

    January 16, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬೋಳೂರಿನ ಅಮೃತ ವಿದ್ಯಾಲಯಂ ಆವರಣದಲ್ಲಿ ಜರಗಿದ ಮಠದ 25ನೇ ವರ್ಷದ ಸಂಭ್ರಮಾಚರಣೆ ಹಾಗೂ ರಾಷ್ಟ್ರೀಯ ಯುವದಿನದ ಅಂಗವಾಗಿ ಅಮೃತ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಆಯೋಜಿಸಲಾದ ‘ಯುವ ಸಾಹಿತ್ಯ ಸಮ್ಮೇಳನ’ವು ದಿನಾಂಕ 13-01-2024ರಂದು ನಡೆಯಿತು.

    ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರಿನ ಮಾತಾ ಅಮೃತನಂದಮಯಿ ಮಠದ ಸ್ವಾಮಿನಿ ಮಂಗಲಾಮೃತ ಪ್ರಾಣ ಅವರು ಮಾತನಾಡುತ್ತಾ “ಸಾಹಿತ್ಯದ ಓದು ಮತ್ತು ರಚನೆಯಿಂದ ವ್ಯಕ್ತಿತ್ವದ ಬೆಳವಣಿಗೆ ಆಗುತ್ತದೆ. ಇದು ಶಿಕ್ಷಣಕ್ಕೆ ಪೂರಕವಾದ ಒಂದು ಚಟುವಟಿಕೆಯಾಗಿದ್ದು ಯುವಜನರು ತಮ್ಮ ಆಂತರ್ಯದ ಅಭಿವ್ಯಕ್ತಿಗಾಗಿ ಸಾಹಿತ್ಯವನ್ನು ಅವಲಂಬಿಸುವುದು ಸೂಕ್ತ” ಎಂದು ಹೇಳಿದರು.

    ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಅವರು “ಸಾಹಿತ್ಯದ ಬೆಳವಣಿಗೆಗೆ ನಾವು ಯುವಜನರ ಕಡೆಗೆ ಹೆಚ್ಚಾಗಿ ಗಮನ ಹರಿಸಿದ್ದೇವೆ. ಯುವಜನರಿಗೆ ಅನ್ವಯವಾಗುವ ಕಾರ್ಯಕ್ರಮಗಳ ಮೂಲಕ ಅವರನ್ನು ತಲಪುವ ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ ಕವಿ ಸಾಹಿತಿ ಹಾಗೂ ಅಮೃತ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಅಧ್ಯಕ್ಷರಾದ ಡಾ. ವಸಂತಕುಮಾರ ಪೆರ್ಲ ಅವರು “ಸಾಹಿತ್ಯದ ಮೂಲಕ ಒಂದು ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ನಮ್ಮ ಉದ್ದೇಶವಾಗಿರಬೇಕು. ವಿಚಾರಗಳನ್ನು ಆಳವಾಗಿ ಅರಿತುಕೊಳ್ಳಬೇಕು ಮತ್ತು ಅವುಗಳನ್ನು ಅನುಭವಗಮ್ಯ ಮಾಡಿಕೊಂಡು ಒಳ್ಳೆಯ ಭಾಷೆಯ ಮೂಲಕ ಅಭಿವ್ಯಕ್ತಿಸಿದಾಗ ಉತ್ತಮ ಸಾಹಿತ್ಯ ರಚನೆ ಆಗುತ್ತದೆ” ಎಂದರು.

    ಅಮೃತ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ಸಂಚಾಲಕಿ ವೀಣಾ ಟಿ. ಶೆಟ್ಟಿ ಸ್ವಾಗತಿಸಿ, ಸದಸ್ಯ ಡಾ. ಬಾಲಕೃಷ್ಣ ಭಾರದ್ವಾಜ್ ನಿರ್ವಹಿಸಿ, ಇನ್ನೋರ್ವ ಸದಸ್ಯ ಪ್ರವೀಣ್ ಚಂದ್ರ ಶರ್ಮ ವಂದಿಸಿದರು. ಅನಂತರ ಪ್ರಬಂಧಗೋಷ್ಠಿ, ಕಥಾಗೋಷ್ಠಿ, ಕವನಗೋಷ್ಠಿಗಳು ಜರಗಿದವು. ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಿಂದ ಆಗಮಿಸಿದ್ದ ಯುವಜನರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಿಧನರಾದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರರಿಗೆ ನುಡಿನಮನ
    Next Article ಕೊಡಗಿನ ಕವಿ ಸಾಹಿತಿಗಳ ಪರಿಚಯ ಮಾಲಿಕೆ – ಬಲ್ಲಡಿಚಂಡ ಕಸ್ತೂರಿ ಸೋಮಯ್ಯ
    roovari

    Add Comment Cancel Reply


    Related Posts

    ಕಟಪಾಡಿ ವೇಣುಗಿರಿಯಲ್ಲಿ ‘ಭಜನಾ ವೈಭವ 2025’ ಸಾಂಪ್ರದಾಯಿಕ ಭಜನಾ ಸ್ಪರ್ಧೆ | ಜೂನ್ 22

    May 20, 2025

    ನಿಡ್ಲೆಯಲ್ಲಿರುವ ಕರುಂಬಿತ್ತಿಲ್ ಮನೆಯಲ್ಲಿ ‘ಕರುಂಬಿತ್ತಿಲ್ ಶಿಬಿರ 2025’ | ಮೇ 20ರಿಂದ 25

    May 19, 2025

    ರಾಜ್ಯ ಮಟ್ಟದ ಕವನ ಮತ್ತು ಸಣ್ಣಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

    May 19, 2025

    ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ ಎಂಟು ಕೃತಿಗಳ ಆಯ್ಕೆ

    May 19, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.