ಶಿವಮೊಗ್ಗ : ಕೇಂದ್ರ ಸಾಹಿತ್ಯ ಅಕಾಡೆಮಿ ನವದೆಹಲಿ (ಸಂಸ್ಕೃತಿ ಸಚಿವಾಲಯ ಭಾರತ ಸರಕಾರ) ಮತ್ತು ಸೌರಭ ಸಾಂಸ್ಕೃತಿಕ ಸಂಸ್ಥೆ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ‘ಯುವ ಸಾಹಿತಿ’ ಕಾರ್ಯಕ್ರಮವನ್ನು ಶಿವಮೊಗ್ಗದ ಮಥುರಾ ಪ್ಯಾರಾ ಡೈಸ್ ಹೋಟೆಲಿನ ಸಭಾಂಗಣದಲ್ಲಿ ದಿನಾಂಕ 10 ಮೇ 2025, ಶನಿವಾರ ಸಂಜೆ ಗಂಟೆ 5-30ಕ್ಕೆ ಹಮ್ಮಿಕೊಳ್ಳಲಾಗಿದೆ.
ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಚನ್ನಪ್ಪ ಅಂಗಡಿ ಇವರು ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಹಿರಿಯ ಸಾಹಿತಿ ಎಸ್.ಜಿ. ಸಿದ್ಧರಾಮಯ್ಯ ಅಧ್ಯಕ್ಷತೆ ವಹಿಸಲಿರುವರು. ಯುವ ಸಾಹಿತಿಗಳಾದ ಶಂಕರ್ ಸಿಹಿಮೊಗ್ಗೆ, ಸೂರ್ಯಕೀರ್ತಿ ಮತ್ತು ಸಂಘಮಿತ್ರೆ ನಾಗರಘಟ್ಟ ಇವರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರವೇಶ ಉಚಿತವಾಗಿದ್ದು, ಎಲ್ಲಾ ಸಾಹಿತ್ಯ ಆಸಕ್ತರು ಭಾಗವಹಿಸಬಹುದು.